ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಚಿವರು ಬಂದಂತಹ ಸಂದರ್ಭದಲ್ಲಿ ನಾನು ಇರಬಾರದೆಂದು ತೀರ್ಮಾನಿಸಿದ್ದೇನೆ : ಭಾವುಕರಾದ ಬಿ ವೈ ವಿಜಯೇಂದ್ರ

ಏಳನೇ ದಿನಕ್ಕೆ ಕಾಲಿಟ್ಟ ರೈತರ ಅಹೋರಾತ್ರಿ ಹೋರಾಟ

ಪ್ರಾಮಾಣಿಕವಾಗಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಮಸಿ ಹಚ್ಚುವಂತ ಕೆಲಸ ಮಾಡಲಾರೆ: ಬಿ ವೈ ವಿಜಯೇಂದ್ರ

ಬೆಳಗಾವಿ/ ಮೂಡಲಗಿ : ಇವತ್ತು ಏಳನೇ ದಿನಕ್ಕೆ ಕಾಲಿಟ್ಟ ರೈತರ ಪ್ರಾಮಾಣಿಕ ಹೋರಾಟಕ್ಕೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು, ಸಚಿವರನ್ನು ಕಳಿಸಿಕೊಡುವಂತ ಕೆಲಸ ಮಾಡುತ್ತಿದ್ದು, ಸಚಿವರು ಬಂದಂತಹ ಸಂದರ್ಭದಲ್ಲಿ ನಾನು ಇರಬಾರದು ಎಂದು ತೀರ್ಮಾನಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭಾವುಕರಾಗಿ ಹೇಳಿದರು.

ಬುಧವಾರದಂದು ಗುರ್ಲಾಪೂರ್ ಕ್ರಾಸ್ ಬಳಿ ನಡೆಯುತ್ತಿರುವ 7ನೇ ದಿನದ ರೈತರ ಅಹೋರಾತ್ರಿ ಹೋರಾಟದ ವೇದಿಕೆಯಲ್ಲಿ ಮಾತನಾಡಿದವರು, ಸತತವಾಗಿ ಏಳು ದಿನದವರೆಗೂ ಪ್ರಾಮಾಣಿಕವಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಗೂ ಕಬ್ಬು ಬೆಳೆಗಾರರ ಸಂಘ ಮತ್ತು ವಿವಿಧ ಸಂಘಟನೆಗಳು ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿವೆ, ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಂದು ಈ ರೈತರ ಹೋರಾಟದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂಬ ಆರೋಪಗಳನ್ನು ಹೊತ್ತುಕೊಳ್ಳಲು ನಾನು ತಯಾರಿಲ್ಲ ಹಾಗಾಗಿ ಈ ಹೋರಾಟಕ್ಕೆ ಮಸಿ ಹಚ್ಚುವಂತೆ ಕೆಲಸ ನಾನು ಕೂಡ ಮಾಡಲಾರೆ ಹಾಗಾಗಿ ನಾನು ಬೆಳಗಾವಿಗೆ ಹೋಗಿ ಮೊನ್ನೆ ದಿನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಲಕ್ಕಪ್ಪನನ್ನು ಭೇಟಿ ಮಾಡಿ ಬೆಂಗಳೂರಿಗೆ ಹೋಗುವುದಾಗಿ ಹೇಳಿದರು.

ವರದಿ ವಿಲ್ಸನ್ ಡವಳೇಶ್ವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!