ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ ಮಟ್ಟದ ಕರುನಾಡು ರಾಜ್ಯೋತ್ಸವ ಪ್ರಶಸ್ತಿಗೆ ಶಹೀರಾ ಸವಾರಗೋಳ ಆಯ್ಕೆ

ವಿಜಯಪುರ/ ಕೊಲ್ಹಾರ : 70ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಚಿಕ್ಕಬಳ್ಳಾಪುರ ಕೇಂದ್ರದ ಕರುನಾಡು ಸಾಹಿತ್ಯ ಪರಿಷತ್ತಿನಿಂದ ಕರ್ನಾಟಕ ರಾಜ್ಯೋತ್ಸವ, ಪ್ರಶಸ್ತಿ ಪ್ರಧಾನ ಹಾಗೂ ರಾಜ್ಯ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮವನ್ನು 5/11/25 ರಂದು ಆಯೋಜನೆ ಮಾಡಲಾಗಿದೆ.

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಕೂಡಗಿ ಗ್ರಾಮದ ಶ್ರೀಮತಿ ಶಹೀರಾ ಲಾಲಸಾಬ ಸವಾರಗೋಳ ಅವರು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿದ ಇವರು ರಾಷ್ಟ್ರೀಯ ಮಟ್ಟದಲ್ಲಿ ಆರು ಚಿನ್ನ,ಆರು ಬೆಳ್ಳಿ,ಏಳು ಕಂಚಿನ ಪದಕಗಳು ಮತ್ತು ರಾಜ್ಯಮಟ್ಟದಲ್ಲಿ ನೂರಾರು ಪದಕಗಳು ತಂದು ವಿಜಯಪುರ ಜಿಲ್ಲೆಯ ಕೀರ್ತಿಯನ್ನು ದೇಶದ ಉದ್ದಗಲಕ್ಕೂ ಹಾರಿಸಿದ್ದಾರೆ.

ಕ್ರೀಡಾ ಕ್ಷೇತ್ರದಲ್ಲಿ ತಾವು ಸಲ್ಲಿಸಿದ ಅಮೂಲ್ಯ ಸಾಧನೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ದಿನಾಂಕ 05/11/2025 ರಂದು ನಡೆಯಲಿರುವ ರಾಜ್ಯ ಮಟ್ಟದ ಕವಿಗೋಷ್ಠಿ, ಕರುನಾಡು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಫಯಾಜ್ ಅಹ್ಮದ್ ಖಾನ್ ರವರ ಆದೇಶದ ಮೇರೆಗೆ ಇವರಿಗೆ ರಾಜ್ಯ ಮಟ್ಟದ ಕರುನಾಡು ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಧಾನ ಮಾಡಲಿದ್ದಾರೆ.

ಈ ಅಮೂಲ್ಯವಾದ ಸಾಧನೆ ಮಾಡಿದ ಇವರಿಗೆ ಕರುನಾಡು ಸಾಹಿತ್ಯ ಪರಿಷತ್ತಿನ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಮತ್ತು ಜಿಲ್ಲೆಯ ಕ್ರೀಡಾ ಅಭಿಮಾನಿಗಳ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!