ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಮನವಿ ಸಲ್ಲಿಕೆ.

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಎನ್.ಎಂ.ಡಿ.ಸಿ ಯ ಸಿ.ಎಸ್.ಆರ್. ನಿಧಿಯಲ್ಲಿ ಹಣವನ್ನು ಒದಗಿಸಲು ಶಿಫಾರಸ್ಸು ಮಾಡುವಂತೆ ಆಗ್ರಹಿಸಿ ಕಂಪ್ಲಿಯ ಜೆಡಿಎಸ್ ಮುಖಂಡರಾ ಉಳೇನೂರು ಶಬ್ಬೀರ್ ಬೆಂಗಳೂರಿನಲ್ಲಿ ಕೇಂದ್ರ ಕೈಗಾರಿಕಾ ಸಚಿವರಾದ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಮನವಿ ಸಲ್ಲಿಸಿದ ನಂತರ ಮಾತನಾಡಿದ ಉಳೇನೂರು ಶಬ್ಬೀರ್ ಸಂಡೂರು ತಾಲ್ಲೂಕಿನ ದೋಣಿಮಲೆ ಎನ್.ಎಂ.ಡಿಸಿ ಸಂಸ್ಥೆಯ ಸಿ.ಎಸ್.ಆರ್.( ಸಾಮಾಜಿಕ ಹೊಣೆಗಾರಿಕೆ) ನಿಧಿಯಲ್ಲಿ ಕಂಪ್ಲಿ, ಹೊಸಪೇಟೆ, ಹಗರಿಬೊಮ್ಮನಹಳ್ಳಿ ತಾಲ್ಲೂಕುಗಳ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕಾಗಿ ಪ್ರತಿ ತಾಲ್ಲೂಕಿಗೆ 5 ಕೋಟಿ ರೂಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಎನ್.ಎಂ.ಡಿ.ಸಿಗೆ ಶಿಫಾರಸ್ಸು ಮಾಡುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿಯವರು ಈ ಬಗ್ಗೆ ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮುಖಂಡರಾದ ಮಹ್ಮದ್ ಜಾಕೀರ್, ವಿನೋದ್, ಆಮ್ಜದ್ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!