ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅನಿರೀಕ್ಷಿತ ಮಳೆಗೆ ತೊಯ್ದು ಮೆಕ್ಕೆ ಜೋಳ : ನೆಲಕ್ಕೊರಗಿದ ಭತ್ತದ ಬೆಳೆ : ಆತಂಕದಲ್ಲಿ ಅನ್ನದಾತರು

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನಲ್ಲಿ ಸುರಿದ ಮಳೆಗೆ ಕಟಾವು ಮಾಡಿ ಒಣಗಿಸಲು ಹಾಕಿದ್ದ ಮೆಕ್ಕೆ ಜೋಳ ತೊಯ್ದು ತೊಪ್ಪೆಯಾಗಿದ್ದು, ಕಟಾವಿಗೆ ಬಂದಿದ್ದ ಭತ್ತದ ಬೆಳೆ ನೆಲಕ್ಕೊರಗಿದೆ.
ಕಳೆದ ವಾರ ಸೈಕ್ಲೋನ್ ಅಪ್ಪಳಿಸಿದ್ದರಿಂದ ಕಟಾವು ಮಾಡಿದ ಭತ್ತವೂ ಸೇರಿದಂತೆ ಮೆಕ್ಕೆಜೋಳ ಮತ್ತು ಇತರೆ ಬೆಳೆಗಳು ತೋಯ್ದು ರೈತರು ಅಪಾರ ನಷ್ಟವನ್ನು ಅನುಭವಿಸಿದ್ದರು. ನಂತರ ಕಣ್ಮರೆಯಾಗಿದ್ದ ಮಳೆ ದಿಢೀರನೆ ಪ್ರತ್ಯಕ್ಷವಾಗಿದ್ದು, ಕಟಾವು ಮಾಡಿ ಪಟ್ಟಣದ ಎಪಿಎಂಸಿ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳ ಬಯಲು ಪ್ರದೇಶ, ರಸ್ತೆಗಳಲ್ಲಿ ಒಣಗಲು ಹಾಕಿದ್ದ ಅಪಾರ ಪ್ರಮಾಣದ ಭತ್ತ ಮತ್ತು ಮೆಕ್ಕೆ ಜೋಳ ರಾಶಿಗಳು ತೋಯ್ದು ತೊಪ್ಪೆಯಾಗಿವೆ. ಮಳೆಯ ಲಕ್ಷಣಗಳು ಇಲ್ಲ ಎನ್ನುವ ಕಾರಣದಿಂದ ರೈತರು ಮೆಕ್ಕೆಜೋಳ ಹಾಗೂ ಭತ್ತವನ್ನು ಓಗಲು ಹಾಕಿದ್ದರು. ಅವುಗಳನ್ನು ರಾಶಿ ಮಾಡಿ ಸಂಗ್ರಹಿಸಿರಲಿಲ್ಲ. ದಿಢಿರನೇ ಮಳೆಯಾದ್ದರಿಂದ ರಾಶಿಗಳು ತೋಯ್ದು ತೊಪ್ಪೆಯಾಗಿವೆ.
ಈ ವರ್ಷದ ಮುಂಗಾರು ಹಂಗಾಮಿನಲ್ಲಿ ನಿರೀಕ್ಷೆಗೆ ಮೀರಿದ ಮಳೆಯಾದ್ದರಿಂದ ಭತ್ತವೂ ಸೇರಿದಂತೆ ವಿವಿಧ ಬೆಳೆಗಳು ಮಳೆಗೆ ಹಾನಿಯಾಗಿವೆ. ಈಗಾಗಲೇ ತಾಲ್ಲೂಕಿನಲ್ಲಿ ಶೇ.30ರಷ್ಟು ಭತ್ತದ ಕಟಾವು ಮುಗಿದಿದೆ ಇನ್ನು ಶೇ.70 ರಷ್ಟು ಭತ್ತದ ಕಟಾವು ಮಾಡಬೇಕಾಗಿದ್ದು, ಈ ನಡುವೆ ಮಳೆ ಆಗುತ್ತಿರುವುದು ರೈತರನ್ನು ಸಂಕಷ್ಟಕ್ಕೆ ದೂಡಿದೆ. ಈಗಾಗಲೇ ಮುಮಗಾರು ಹಂಗಾಮಿನ ಭತ್ತದ ಬೆಳೆಯಿಂದ ತೀವ್ರವಾದ ನಷ್ಟಕ್ಕೊಳಗಾಗಿರುವ ರೈತರಿಗೆ ಎರಡನೇ ಬೆಳೆಗೆ ನೀರಿಲ್ಲ ಎನ್ನುವ ವಿಷಯ ಬರಸಿಡಿಲು ಬಡಿದಂತಾಗಿದೆ.
ಮಳೆ ಇದೇ ರೀತಿ ಮುಂದುವರಿದರೆ ಕಟಾವಿಗೆ ಬಂದಿರುವ ಭತ್ತದ ಬೆಳೆ ನೆಲ್ಲಕಚ್ಚುವುದಂತು ನಿಶ್ಚಯವಾಗಿದೆ. ಸರ್ಕಾರ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಎರಡನೇ ಬೆಳೆಗೆ ನೀರೊದಗಿಸುವ ಮೂಲಕ ಅನ್ನದಾತರಿಗೆ ಅನುಕೂಲ ಮಾಡಿಕೊಡಬೇಕಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!