ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರಕಾರಿ ಮಹಿಳಾ ಪದವಿ ಕಾಲೇಜಿಗೆ ಆಯುಕ್ತರ ಭೇಟಿ

ಕೊಪ್ಪಳ : ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ಎನ್. ಮಂಜುಶ್ರೀ, ಆಯುಕ್ತರು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರು ಗುರುವಾರ ಭೇಟಿ ನೀಡಿದರು.
ಆಯುಕ್ತರು ಕಾಲೇಜಿನ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು. ಸಂವಾದದಲ್ಲಿ ವಿದ್ಯಾರ್ಥಿನಿಯರು ಆಯುಕ್ತರು ಕೇಳಿದ ಪ್ರೆಶ್ನೆಗಳಿಗೆ ಬಹಳ ಸಂತೋಷ ಮತ್ತು ಆತ್ಮವಿಶ್ವಾಸದಿಂದ ಉತ್ತರಿಸಿದರು. ಕಾಲೇಜಿಗೆ ಉತ್ತಮ ಶೈಕ್ಷಣಿಕ ಮೂಲಭೂತ ಸೌಕರ್ಯಗಳು ಅಗತ್ಯ ಇವೆ ಎಂದು ವಿದ್ಯಾರ್ಥಿನಿಯರು ಆಯುಕ್ತರಿಗೆ ಮನವಿ ಮಾಡಿಕೊಂಡರು.
ಆಯುಕ್ತರು ಕಾಲೇಜಿನ ಭೋಧಕ, ಭೋಧಕೇತರ ಮತ್ತು ಅತಿಥಿ ಉಪನ್ಯಾಸಕರ ಜತೆ ಸಂವಾದ ನಡೆಸಿದರು. ಕಾಲೇಜಿನ ಪ್ರಾಧ್ಯಾಪಕರ ಪ್ರೇರಣೆ ಮತ್ತು ಸಮರ್ಪಣೆ ಮನೋಭಾವನೆಯನ್ನು ಆಯುಕ್ತರು ಪ್ರಶಂಸೆ ವ್ಯಕ್ತ ಪಡಿಸಿದರು. ಈ ಮಹಿಳಾ ಪದವಿ
ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಬಹಳ ಹರ್ಷಚಿತ್ತದಿಂದ ಮತ್ತು ಸಂತೋಷದಿಂದ ವಿದ್ಯಾಬ್ಯಾಸ ಮಾಡುತ್ತಿದ್ದಾರೆ ಎಂದು ಅನಿಸಿಕೆಯನ್ನು ಹಂಚಿಕೊಂಡರು.
ಆಯುಕ್ತರು ಭೇಟಿ ನೀಡಿದ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ, ಕೊಪ್ಪಳದ ಲೀಡ್ ಕಾಲೇಜಿನ ಪ್ರಾಚಾರ್ಯ ಡಾ. ವೈ. ಬಿ. ಅಂಗಡಿ, ಕಾಲೇಜಿನ ಪ್ರಾಧ್ಯಾಪಕರಾದ ನಾಗರತ್ನ ತಮ್ಮಿ ನಾಳ, ಡಾ. ಗವಿಸಿದ್ದಪ್ಪ ಮುತ್ತಾಳ, ಡಾ. ಹುಲಿಗೆಮ್ಮ, ವಿಠೋಬ, ಪ್ರಕಾಶ ಗೌಡ, ಡಾ. ಮಲ್ಲಿಕಾರ್ಜುನ, ಡಾ. ನರಸಿಂಹ,ಡಾ. ಅಶೋಕ ಕುಮಾರ, ಶುಭ, ಸುಮಿತ್ರಾ, ಸುಮಯ್ಯ, ಅಲ್ಲಾಭಕ್ಷ, ಹನುಮಪ್ಪ ಮೇಟಿ, ಕಾಲೇಜಿನ ಎಲ್ಲ ಭೋಧಕ, ಭೋದಕೇತರ ಸಿಬ್ಬಂದಿಗಳು ಮತ್ತು ಕಾಲೇಜಿನ ಎಲ್ಲಾ ಅತಿಥಿ ಉಪನ್ಯಾಸಕರು, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!