ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕನಕದಾಸರ ಕಾವ್ಯ ಕೃತಿಗಳ ಆಶಯಗಳನ್ನು ಅರಿತುಕೊಳ್ಳಿ : ಪ್ರಾಚಾರ್ಯ ಜಗದೀಶ. ಭೈರಮಟ್ಟಿ

ಬಾಗಲಕೋಟೆ: ಕನಕದಾಸರು ಹಾಗೂ ಪುರಂದರ ದಾಸರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ; ಕನಕದಾಸರ ಕೃತಿಗಳು ಒಳಗೊಂಡ ವಿಷಯ ವಸ್ತುಗಳು ಇಂದಿಗೂ ಆದರ್ಶಪ್ರಾಯ ಎನಿಸಿವೆ. ಕನಕದಾಸರ ಬದುಕಿನಲ್ಲಿನ ಮೌಲ್ಯಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೆಕೆಂದು ಪ್ರಾಚಾರ್ಯ ಡಾ. ಜಗದೀಶ ಗು. ಭೈರಮಟ್ಟಿ ಹೇಳಿದರು.
ಜಿಲ್ಲೆಯ ಬಾಗಲಕೋಟೆ ತಾಲೂಕಿನ ಬೇವೂರಿನ ಆದರ್ಶ ವಿದ್ಯಾವರ್ಧಕ ಸಂಘದ ಶ್ರೀ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್ ಹಾಗೂ ಸಾಂಸ್ಕೃತಿಕ ವೇದಿಕೆಗಳ ವತಿಯಿಂದ ಹಮ್ಮಿಕೊಂಡಿದ್ದ ದಾಸಶ್ರೇಷ್ಠ ಕನಕದಾಸರ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಮಧಾನ್ಯ ಚರಿತೆ, ಮೋಹನತರಂಗಿಣಿ, ನಳಚರಿತೆ,ಹರಿಭಕ್ತಿಸಾರ ಕಾವ್ಯ ಕೃತಿಗಳ ಆಶಯಗಳನ್ನು ಅಧ್ಯಯನದ ಮೂಲಕ ಅರಿತು ಜೀವನದ ಸಾರ್ಥಕತೆಯನ್ನು ಕಾಣಬೆಕೆಂದು ಹೇಳಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಕನ್ನಡ ಸಂಘದ ಮುಖ್ಯಸ್ಥ ಡಾ. ಸಂಗಮೇಶ ಹಂಚಿನಾಳ ಮಾತನಾಡಿ ಸಾಹಿತ್ಯ, ಸಂಗೀತ ಕ್ಷೇತ್ರಗಳಿಗೆ ಕನಕದಾಸರ ಕೊಡುಗೆಗಳು ಅನನ್ಯ ಎನಿಸಿವೆ. ಹರಿಭಕ್ತರಾಗಿ ಅವರು ಧಾರ್ಮಿಕ ಅಧ್ಯಾತ್ಮಿಕ ಕ್ಷೇತ್ರದಲ್ಲಿ ಸಾಧನೆಮಾಡಿದ್ದು ಸ್ಮರಣೀಯ ಎನಿಸಿದೆ ಎಂದು ಹೇಳಿದರು.
ಭಕ್ತ ಕನಕದಾಸರ ಭಾವಚಿತ್ರಕ್ಕೆ ವಿದ್ಯಾರ್ಥಿಗಳು ಸಿಬ್ಬಂದಿವರ್ಗ ಪೂಜೆ ನೆರವೇರಿಸಿ ಪುಷ್ಪನಮನ ಸಲ್ಲಿಸಿದರು. ವಿಶ್ರಾಂತ ಪ್ರಾಚಾರ್ಯ ಬಿ.ಬಿ. ಬೇವೂರ. ಮಹಿಳಾ ಸಬಲೀಕರಣ ಘಟಕದ ಮುಖ್ಯಸ್ಥ ಎಸ್.ಎಸ್ ಆದಾಪೂರ, ಸ್ಕೌಟ್ಸ್ ಮತ್ತು ಗೈಡ್ಸ್ ವಿಭಾಗದ ಮುಖ್ಯಸ್ಥ ಡಿ.ವಾಯ್. ಬುಡ್ಡಿಯವರ, ಬೋಧಕೇತರ ಸಿಬ್ಬಂದಿ ಶಿವು ಕಟಗಿ ಉಪಸ್ಥಿತರಿದ್ದರು. ಸಾಂಸ್ಕೃತಿಕ ವೇದಿಕೆ, ಐ.ಕ್ಯೂ.ಎ.ಸಿ ಘಟಕಗಳ ಮುಖ್ಯಸ್ಥ ಡಾ. ಎ.ಎಮ್. ಗೊರಚಿಕ್ಕನವರ ಸ್ವಾಗತಿಸಿ ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಕಟದ ಕಾರ್ಯಕ್ರಮಾಧಿಕಾರಿ ಜಿ.ಎಸ್ ಗೌಡರ ವಂದಿಸಿದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!