ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಯುವ ಪತ್ರಕರ್ತನಿಗೆ ಒಲಿದ ಕನ್ನಡ ಸೇವಾ ರತ್ನ ಪ್ರಶಸ್ತಿ

ಬೀದರ್: ಕೇತಕಿ ಶೈಕ್ಷಣಿಕ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಸ್ಥೆಯ ವತಿಯಿಂದ ಇಂದು ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾಧ್ಯಮ ಕ್ಷೇತ್ರದಲ್ಲಿನ ಸೇವೆಯನ್ನು ಪರಿಗಣಿಸಿ ಬೀದರ್ ಜಿಲ್ಲೆಯ ಯುವ ಪತ್ರಕರ್ತ ದೇವರಾಜ ವನಗೇರಿ ಅವರಿಗೆ ರಾಜ್ಯ ಮಟ್ಟದ ಕನ್ನಡ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.

ಬಾಗಲಕೋಟ ಜಿಲ್ಲೆಯ ಇಳಕಲ್ ತಾಲೂಕಿನ ಸಂಕ್ಲಾಪುರ ಗ್ರಾಮದ ಯುವ ಪತ್ರಕರ್ತ ದೇವರಾಜ ಅವರು ಕಳೆದ ಒಂದು ವರ್ಷದಿಂದ ಸುದ್ದಿ ವಾಹಿನಿಯೊಂದರಲ್ಲಿ ಬೀದರ್ ಜಿಲ್ಲಾ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ತಮ್ಮ ನೇರ ಹಾಗೂ ನಿಷ್ಠುರ ವರದಿಗಾರಿಕೆಯ ಮೂಲಕ ಶೋಷಿತ ಸಮುದಾಯ ಹಾಗೂ ತಳ ಸಮುದಾಯಗಳ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೇವರಾಜ ಅವರಿಗೆ ಕನ್ನಡ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಹಣ್ಮು ಪಾಜಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಇನ್ ಸೈಟ್ ಐಎಎಸ್ ಅಕಾಡೆಮಿ ಮುಖ್ಯಸ್ಥ ಜಿ.ಬಿ. ವಿನಯಕುಮಾರ್ ಸೇರಿ ಇನ್ನಿತರ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!