ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರಪಳಿ ಗುಂಡು ಎಸೆತ ಸ್ಪರ್ಧೆಯಲ್ಲಿ ಹ್ಯಾಟ್ರಿಕ್ ಸಾಧನೆ: ಐಶ್ವರ್ಯ ಮುಕ್ಕಣ್ಣ ರಾಠೋಡ್

ಕೊಪ್ಪಳ :ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ಹಾಗೂ ಕುಮಾರಿ ಶರಣೇಶ್ವರಿ ರಶ್ಮಿ ಮಹಿಳಾ ಬಿ.ಎಡ್ ಕಾಲೇಜು ಕಲ್ಬುರ್ಗಿ ಇವರ ಸಂಯುಕ್ತ ಆಶ್ರಯದಲ್ಲಿ ೧೯ನೇ ಅಂತರ್ ಕಾಲೇಜು ಅಥ್ಲೆಟಿಕ್ ಕ್ರೀಡಾಕೂಟ ೨೦೨೫-೨೬ರ ದಿನಾಂಕ ೫/೧೧/೨೦೨೫ ರಿಂದ ೭/೧೧/೨೦೨೫ರವರೆಗೆ ಕಲಬುರಗಿ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆದವು. ಸದರಿ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕೊಪ್ಪಳದ ಬಿ. ಎ ಅಂತಿಮ ವರ್ಷದ ವಿದ್ಯಾರ್ಥಿನಿ ಐಶ್ವರ್ಯ ಎಂ ರಾಠೋಡ್ ಇವರು ಸರಪಳಿ ಗುಂಡು ಎಸೆತ ಸ್ಪರ್ಧೆಯಲ್ಲಿ ೨೦೨೩-೨೪ನೇ ಸಾಲಿನಲ್ಲಿ ೨೦.೬೩ ಮೀಟರ್ ದೂರ ಎಸೆದು ದಾಖಲೆ ನಿರ್ಮಿಸಿದ್ದಳು. ನಂತರ ಕಳೆದ ೨೦೨೪-೨೫ರ ಸಾಲಿನಲ್ಲಿ ೨೫.೨೩ ಮೀಟರ್ ದೂರ ಎಸೆದು ತಾವೇ ನಿರ್ಮಿಸಿದ ದಾಖಲೆಯನ್ನು ಮುರಿದು ಈ ವರ್ಷ ೨೦೨೫-೨೬ ಸಾಲಿನಲ್ಲಿ ೨೭.೩೦ ಮೀಟರಗಳ ದೂರ ಎಸೆದು ಮತ್ತೆ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ಕ್ರೀಡಾಪಟುವಿನ ಸಾಧನೆಯನ್ನು ಮೆಚ್ಚಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶನಾಲಯವು ೫೦೦೦ ರೂಪಾಯಿಗಳ ನಗದು ಹಾಗೂ ಪ್ರಶಸ್ತಿ ಪಾರಿತೋಷಕಗಳನ್ನು ನೀಡಿ ಗೌರವಿಸಿದೆ. ವಿದ್ಯಾರ್ಥಿನಿಯರಾದ ದೇವಮ್ಮ ಬಿ.ಎ ಅಂತಿಮ ವರ್ಷದ ವಿದ್ಯಾರ್ಥಿನಿ ೧೦,೦೦೦ ಮೀಟರ್ ಓಟದಲ್ಲಿ ೬ನೇ ಸ್ಥಾನವನ್ನು ಗಳಿಸಿದ್ದಾಳೆ ಹಾಗೂ ಪಾರ್ವತಿ ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿನಿ ೧೦,೦೦೦ ಮೀಟರ್ ಓಟದಲ್ಲಿ ೭ನೇ ಸ್ಥಾನವನ್ನು ಗಳಿಸಿದ್ದಾರೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಗಣಪತಿ ಕೆ ಲಮಾಣಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಪ್ರದೀಪ್ ಕುಮಾರ್ ಯು ಹಾಗೂ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು, ಅತಿಥಿ ಉಪನ್ಯಾಸಕರು, ಹಾಗೂ ವಿದ್ಯಾರ್ಥಿನಿಯರು ಇವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!