ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು: ವೆಂಟಿಲೇಟರ್‌ನಲ್ಲಿ ಚಿಕಿತ್ಸೆ

ಮುಂಬೈ : ಬಾಲಿವುಡ್‌ನ ಹೀ ಮ್ಯಾನ್, ಎವರ್‌ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಅಂತಲೇ ಜನಪ್ರಿಯರಾಗಿರುವ ಹಿರಿಯ ನಟ ಧರ್ಮೇಂದ್ರ (89) ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ಧರ್ಮೇಂದ್ರ ಅವರು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು.
ನ.10 ಬೆಳಿಗ್ಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆರು ದಶಕಗಳ ವೃತ್ತಿಜೀವನದಲ್ಲಿ ಧರ್ಮೇಂದ್ರ ಅವರು ಹಿಂದಿ ಚಿತ್ರರಂಗದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. 1960ರಲ್ಲಿ ʻದಿಲ್ ಭೀ ತೇರಾ ಹಮ್ ಭೀ ತೇರೆʼ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಅಲ್ಲಿಂದ ಪ್ರಾರಂಭವಾಗಿ ಬಂದಿನಿ , ಅನುಪಮಾ, ಶೋಲೆ, ಚುಪ್ಕೆ ಚುಪ್ಕೆ, ಮೇರಾ ಗಾಂವ್ ಮೇರಾ ದೇಶ್ ಮತ್ತು ಡ್ರೀಮ್ ಗರ್ಲ್ ಸೇರಿದಂತೆ ಹಲವುಗಳಲ್ಲಿ ಸಿನಿಮಾಗಳಲ್ಲಿ ನಟಿಸಿದ್ದಾರೆ.

2025ರ ಆರಂಭದಲ್ಲಿ ಧರ್ಮೇಂದ್ರ ಅವರು ಶಾಹಿದ್ ಕಪೂರ್ ಮತ್ತು ಕೃತಿ ಸನೋನ್ ನಟನೆಯ ʻತೇರಿ ಬಾತೋ ಮೇ ಐಸಾ ಉಲ್ಜಾ ಜಿಯಾ’ ಸಿನಿಮಾದಲ್ಲಿ ಕೊನೆಯ ಬಾರಿ ಕಾಣಿಸಿಕೊಂಡಿದ್ದರು. ಇನ್ನೂ ಡಿಸೆಂಬರ್‌ 25ರಂದು ತೆರೆಕಾಣಲಿರುವ ʻಇಕ್ಕಿಸ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!