ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನವೆಂಬರ್ ೧೬ ರಂದು ಮುಗಳಖೋಡದಲ್ಲಿ ಶ್ರೀಮನ್ ನಿಜಗುಣ ಶಿವಯೋಗಿ ಜಯಂತೋತ್ಸವ

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಗ್ರಾಮದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ಶ್ರೀ ಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನದ ಆಶ್ರಯದಲ್ಲಿ ರವಿವಾರ ಮುಂಜಾನೆ 10.30 ಕ್ಕೆ ನಾಡಿನ ಶ್ರೇಷ್ಠ ತತ್ವಜ್ಞಾನಿ ಶ್ರೀಮನ್ ನಿಜಗುಣ ಶಿವಯೋಗಿಗಳ ಜನ್ಮ ಜಯಂತೋತ್ಸವ ಹಾಗೂ 122 ನೇ ರವಿವಾರದ ಸತ್ಸಂಗ, ಆರೂಢರ ಅಭಿಷೇಕ ಕಾರ್ಯಕ್ರಮವು ನಡೆಯಲಿದೆ. ಈ ಸಮಾರಂಭದ ಸನ್ನಿಧಾನವನ್ನು ಕುಳಲಿಯ ಗುರುನಾಥಾರೂಢರ ಮಠದ‌‌ ದಾಸೋಹ ರತ್ನ, ಪೂಜ್ಯ ಶ್ರೀ ಶಂಕರಾನಂದ ಶ್ರೀಗಳು ವಹಿಸುವರು. ಹೊಸೂರ ಗ್ರಾಮದ ಪರಮಾನಂದ ಶ್ರೀಗಳು‌ ಸಮ್ಮುಖತ್ವ ವಹಿಸುವರು. ಭೀಮಾವಧೂತ‌ರ ಮಠದ ಪಂಚಾಕ್ಷರಿ ಶ್ರೀಗಳು ನೇತೃತ್ವ ವಹಿಸುವರು. ಗುರು ಪರಂಪರೆಯ ಹಿರಿಯ ಸೇವಾ ಧುರೀಣ ಶಿವಪ್ಪ ಗೌಡ್ರು ಪವಾಡಶಟ್ಪಿ [ಪೋಲಿಸ್ ಗೌಡ] ಹಾಗೂ ಆಶ್ರಮದ ಕುಮಾರ ಗುರುಪ್ರಸಾದ್ ಸ್ವಾಮೀಜಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.
ಪ್ರತಿಷ್ಠಾನದ ಅಧ್ಯಕ್ಷ ಪ.ಪೂ.ಶರಣಬಸವ ಶಾಸ್ತ್ರಿಗಳು ಸಭೆಯ ಅಧ್ಯಕ್ಷತೆ ವಹಿಸುವರು.
ಈ ಸಂದಭ೯ದಲ್ಲಿ ಭಜನೆ, ತತ್ವಪದಗಳ ಗಾಯನ ಜರುಗುವುದು. ನಂತರ 2025 ರ “ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ” ಪುರಸ್ಕೃತೆ ಜನಪದ ಸಂಗೀತ ಕ್ಷೇತ್ರದ ಸೇವಕರಾದ ಶ್ರೀಮತಿ ಶ್ಯಾಮಲಾ ಲಕ್ಷ್ಮೇಶ್ವರ ಅವರಿಗೆ ಗೌರವ ಸಮರ್ಪಣೆ ಮಾಡಲಾಗುವದು ಎಂದು ಶ್ರೀ ಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನದ ಮುಖಂಡರಾದ ನಿಂಗನಗೌಡ ಮಂಟೂರ ಹಾಗೂ ಶಂಕರಗೌಡ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!