ಬಾಗಲಕೋಟೆ / ಜಮಖಂಡಿ: ೨೦೨೫-೨೬ನೇ ಸಾಲಿನ ಶಾಲಾ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಈಜು ಸ್ಪರ್ಧೆಯ ಬಾಲಕರ ವಿಭಾಗದ ೫೦ ಮೀ ಮತ್ತು ೧೦೦ ಮೀ ಬಟರ್‌ಫ್ಲೆಕ್ಸ್ ಸ್ಪರ್ಧೆಯಲ್ಲಿ ಸ್ಥಳೀಯ ಬಸವಜ್ಯೋತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಪೃಥ್ವಿರಾಜ ಹಿರೇಮಠ ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಪ್ರಾಚಾರ್ಯ ಡಾ. ಟಿ. ಪಿ. ಗಿರಡ್ಡಿ ತಿಳಿಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯ ಮೈಸೂರು ಜಿಲ್ಲಾ ಉಪನಿರ್ದೇಶಕರ ಕಚೇರಿಯ ಆಶ್ರಯದಲ್ಲಿ ನ.೮ ಮತ್ತು ನ.೯ ರಂದು ಮೈಸೂರಿನ ಯುನಿವರ್ಸಿಟಿ ಸ್ವಿಮ್ಮಿಂಗ್ ಫೂಲ್‌ನಲ್ಲಿ ನಡೆದ ಈಜು ಮತ್ತು ಡೈವಿಂಗ್ ಸ್ಪರ್ಧೆಯಲ್ಲಿ ಅವರು ಈ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ. ಗಿರೀಶ ಕಡ್ಡಿ, ಆಡಳಿತಾಧಿಕಾರಿ ಪ್ರೊ. ಬಸವರಾಜ ಕಡ್ಡಿ ಹಾಗೂ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ತಮ್ಮ ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ವಿವರಿಸಿದ್ದಾರೆ.
- ಕರುನಾಡ ಕಂದ ಪತ್ರಿಕೆ



















