ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕ ಶರಣಗೌಡ ಕಂದಕೂರು ಜನ್ಮದಿನದ ಹಿನ್ನಲೆ ಉಚಿತ ಆರೋಗ್ಯ ತಪಾಸಣೆ ಶಿಬಿರ.

ಗುರುಮಠಕಲ್: ನ. 17 ಲಯನ್ಸ್ ಕ್ಲಬ್ ಆಫ್ ಗುರುಮಠಕಲ್ ಸೇವಾ ಸದನ ವತಿಯಿಂದ ಗುರುಮಠಕಲ್ ಮತಕ್ಷೇತ್ರದ ಶಾಸಕರಾದ ಶ್ರೀ ಶರಣಗೌಡ ಕಂದಕೂರು ಅವರ ಜನ್ಮದಿನದ ಪ್ರಯುಕ್ತ ಪಟ್ಟಣದ ಶ್ರೀ ಸಾಯಿ ಆಸ್ಪತ್ರೆಯ ವೈದ್ಯರಾದ ಡಾ.ಪವನ್ ಕುಮಾರ್ ಅವರ ನೇತೃತ್ವದಲ್ಲಿ ಇಂದು ದಿನಾಂಕ 17-11-2025, ಸೋಮವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ರಕ್ತದಾನ ಶಿಬಿರ ಜರುಗಿತು.

ಕಾರ್ಯಕ್ರಮದಲ್ಲಿ ರೋಗಿಗಳಿಗೆ ಉಚಿತ ಬಿಪಿ ಶುಗರ್ ಸೇರಿದಂತೆ ಆರೋಗ್ಯ ತಪಾಸಣೆ, ಚಿಕಿತ್ಸೆ ಹಾಗೂ ಸಲಹೆಗಳನ್ನು ನೀಡಲಾಯಿತು. ತಪಾಸಣೆಯಲ್ಲಿ ಸುಮಾರು 75ಕ್ಕೂ ಅಧಿಕ ಜನ ಭಾಗವಹಿಸಿದ್ದು, ತಪಾಸಣೆಗೆ ಒಳಪಟ್ಟ ಎಲ್ಲರಿಗೂ ಹಣ್ಣುಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡ ಶರಣು ಅವಂಟಿ, ವಿನಯಶೇಖರ ಹಿರೇಮಠ, ಶ್ರೀನಿವಾಸ ರೆಡ್ಡಿ, ರಾಮಕೃಷ್ಣ ಯಾದವ್, ಪ್ರಕಾಶ ಗುಮಡಲ್ ಚಂದ್ರಶೇಖರ ಮಂಚಾಲ ಹಾಗೂ ಆಸ್ಪತ್ರೆ ಸಿಬ್ಬಂದಿ ಭಾಗವಹಿಸಿದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!