ಕೊಪ್ಪಳ / ಗಂಗಾವತಿ : ತಾಲೂಕಿನ ಗ್ರಾಮ ಪಂಚಾಯತಿ ಸದಸ್ಯರ ಗೌರವಧನ ದುರುಪಯೋಗ ಮಾಡಿಕೊಂಡ ಆಧಾರದ ಮೇಲೆ ಪಂಚಾಯತ ಅಭಿವೃದ್ಧಿ ಅಧಿಕಾರಿ ಅಮಾನತು ಆದ ಘಟನೆ ನಡೆದಿದೆ.
ತಾಲೂಕಿನ ಹಣವಾಳ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗೌಸ್ ಸಾಬ ಮುಲ್ಲಾ, ಗ್ರಾಮ ಪಂಚಾಯತಿ ಸದಸ್ಯರ 1.32 ಲಕ್ಷ ರೂಪಾಯಿ ಗೌರವಧನದ ಅನುದಾನವನ್ನು ಬೇರೆ ಕಾಮಗಾರಿಗೆ ಬಳಕೆ ಮಾಡಿ ದುರುಪಯೋಗ ಆಧಾರದ ಮೇಲೆ ಗೌಸ್ಸಾಬ ಮುಲ್ಲಾ ಇವರನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ವರ್ನಿತ್ ನೇಗಿಯವರು ಆದೇಶ ಹೊರಡಿಸಿದ್ದಾರೆ.
ಈ ಹಿಂದೆ 2020-21 ರಲ್ಲಿ ಕೊಪ್ಪಳ ತಾಲ್ಲೂಕಿನ ಅಗಳಕೇರಾ ಗ್ರಾಮ ಪಂಚಾಯತಿಯಲ್ಲಿ 14 ಮತ್ತು 15 ನೇ ಹಣಕಾಸು ಯೋಜನೆಯಡಿಯಲ್ಲಿ ಸುಮಾರು 29 ಲಕ್ಷಕ್ಕೂ ಹೆಚ್ಚು ಸರ್ಕಾರದ ಹಣ ದುರುಪಯೋಗ ಮಾಡಿಕೊಂಡು ಅಮಾನತು ಆಗಿ ಅವರ ಮೇಲೆ F I R ಕೂಡ ದಾಖಲಾಗಿತ್ತು.
ವರದಿ : ಜಿಲಾನಸಾಬ್ ಬಡಿಗೇರ್



















