ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನ

ಮುಂಬೈ : ಬಾಲಿವುಡ್ ನ ಹಿರಿಯ ನಟ, ಧರ್ಮೇಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಬಾಲಿವುಡ್ ನ ‘ಹೀಮ್ಯಾನ್’ ಎಂದೇ ಖ್ಯಾತರಾಗಿದ್ದ ಧರ್ಮೇಂದ್ರ ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗವನ್ನು ಆಳಿದ್ದರು.

ಇದೇ ತಿಂಗಳ ಮೊದಲವಾರದಲ್ಲಿ ತೀವ್ರ ಅನಾರೋಗ್ಯದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಧರ್ಮೇಂದ್ರ ಅವರನ್ನು ದಾಖಲಿಸಲಾಗಿತ್ತು, ನಂತರ ಡಿಸ್ಚಾರ್ಜ್ ಆಗಿ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಕೊನೆಯುಸಿರೆಳೆದಿದ್ದಾರೆ ಕುಟುಂಬದ ಮೂಲಗಳು ತಿಳಿಸಿವೆ.

ಧರ್ಮೇಂದ್ರ ಅವರ ಪತ್ನಿ ಹೇಮಾ ಮಾಲಿನಿ ಮತ್ತು ಮಗಳು ಇಶಾ ಡಿಯೋಲ್ ಸೇರಿದಂತೆ ಅವರ ಕುಟುಂಬ ಸೋಮವಾರ ಮುಂಬೈನ ವಿಲೇ ಪಾರ್ಲೆಯಲ್ಲಿರುವ ಸ್ಮಶಾನಕ್ಕೆ ತೆರಳುತ್ತಿರುವುದು ಕಂಡುಬಂದಿದೆ. ಬಾಲಿವುಡ್ ಹಿರಿಯ ನಟರಾದ ಅಮಿತಾಬ್ ಬಚ್ಚನ್, ಅಮೀರ್ ಖಾನ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಸ್ಮಶಾನಕ್ಕೆ ಆಗಮಿಸಿದ್ದಾರೆ.

ಈ ಬಗ್ಗೆ ಇನ್ಸ್ಟಾ ಗ್ರಾಂ ನಲ್ಲಿ ಪೋಸ್ಟ್ ಮಾಡಿರುವ ಕರಣ್ ಜೋಹರ್ ಒಂದು ಯುಗದ ಅಂತ್ಯ ಎಂದು ಬರೆದುಕೊಂಡಿದ್ದಾರೆ.
ಧರ್ಮೇಂದ್ರ ಅವರು ಶೋಲೆ (1975) ಮತ್ತು ಚುಪ್ಕೆ ಚುಪ್ಕೆ (1975) ಸೇರಿದಂತೆ ಅನೇಕ ಸೂಪರ್-ಹಿಟ್ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಫೂಲ್ ಔರ್ ಪತ್ತರ್ (1966), ಸೀತಾ ಔರ್ ಗೀತಾ (1972), ಧರಮ್ ವೀರ್ (1977), ಮತ್ತು ಮೇರಾ ಗಾಂವ್ ಮೇರಾ ದೇಶ್ (1971). ಅವರು ಪ್ರತಿಗ್ಯಾ (1975), ಆಂಖೇನ್ (1968), ಮತ್ತು ಬಾಂದಿನಿ (1963) ನಂತಹ ಸಿನಿಮಾಗಳಿಂದಲೂ ಅವರು ಹೆಸರುವಾಸಿಯಾಗಿದ್ದರು.

ಸಿನಿಮಾಗಳಲ್ಲಿ ಮುಂದುವರಿದ ನಟನೆ
ಶ್ರೀರಾಮ್ ರಾಘವನ್ ನಿರ್ದೇಶನದ ‘ಇಕ್ಕೀಸ್’ ಚಿತ್ರದಲ್ಲಿ ಧರ್ಮೇಂದ್ರ ಅವರು ಕೊನೆಯದಾಗಿ ನಟಿಸಿದ್ದರು. ಇದು ಡಿಸೆಂಬರ್‌ 25ರಂದು ತೆರೆ ಕಾಣಬೇಕಿದೆ. ಈ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದ ನಟಿಸುತ್ತಿದ್ದಾರೆ. ‘ಇಕ್ಕೀಸ್’ ಚಿತ್ರದಲ್ಲಿ ಭಾರತದ ಅತಿ ಕಿರಿಯ ಪರಮ ವೀರ ಚಕ್ರ ಪ್ರಶಸ್ತಿ ವಿಜೇತ ಎರಡನೇ ಲೆಫ್ಟಿನೆಂಟ್ ಅರುಣ್ ಖೇತರ್ಪಾಲ್ ಪಾತ್ರದಲ್ಲಿ ಅಗಸ್ತ್ಯ ನಂದ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಅರುಣ್ ಅವರ ನಿಜ ಜೀವನದ ಕಥೆಯನ್ನು ಹೇಳಲಾಗುತ್ತಿದೆಯಂತೆ. 2023ರಲ್ಲಿ ತೆರೆಕಂಡ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರದಲ್ಲಿ ರಣವೀರ್ ಸಿಂಗ್, ಶಬಾನಾ ಅಜ್ಮಿ ಮತ್ತು ಆಲಿಯಾ ಭಟ್ ಅವರೊಂದಿಗೆ ಧರ್ಮೇಂದ್ರ ಅವರು ನಟಿಸಿದ್ದರು. 2024ರಲ್ಲಿ ‘ತೇರಿ ಬಾಟನ್ ಮೇ ಐಸಾ ಉಲ್ಜಾ ಜಿಯಾ’ ಚಿತ್ರದಲ್ಲಿ ಶಹೀದ್ ಕಪೂರ್ ಮತ್ತು ಕೃತಿ ಸನೋನ್ ಅವರೊಂದಿಗೆ ಧರ್ಮೇಂದ್ರ ಕಾಣಿಸಿಕೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!