ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಂಗಳೂರಿನಲ್ಲಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಗೆ ಚಾಲನೆ

ದಕ್ಷಿಣ ಕನ್ನಡ : ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ನ ಮಾತೃ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ೨೫ಕ್ಕೂ ಹೆಚ್ಚು ಹಿಂದೂ ಮುಖಂಡರು ಪಾಲ್ಗೊಂಡು, ಎಲ್ಲಾ ಸಂಘಟನೆಗಳು ಒಟ್ಟಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚೆ ನಡೆಸಿದರು.

ದಿನೇ ದಿನೇ ಹಿಂದೂಗಳ ಮೇಲಿನ ಅತ್ಯಾಚಾರಗಳು ಹೆಚ್ಚಾಗುತ್ತಿವೆ. ಶಿವಮೊಗ್ಗದಲ್ಲಿ ಹಿಂದೂ ಎನ್ನುವ ಕಾರಣಕ್ಕಾಗಿ ಮತಾಂಧರು ಆತನಿಗೆ ಥಳಿಸಿದರು. ಕಾರ್ಕಳದಲ್ಲಿ ಹಿಂದೂ ವಿದ್ಯಾರ್ಥಿಗೆ ಜನಿವಾರ ತೆಗೆಸಿದ್ದು, ಈ ರೀತಿಯ ಅನೇಕ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಹಾಗಾಗಿ, ಇಂತಹ ಘಟನೆಗಳಾದಾಗ ಒಂದೊಂದೇ ಸಂಘಟನೆಗಳು ಹೋರಾಟ ಮಾಡದೆ, ಎಲ್ಲಾ ಹಿಂದೂ ಸಂಘಟನೆಗಳು ಒಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಚರ್ಚಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ದೇಶಾದ್ಯಂತದ ಹಿಂದೂಗಳ ಮೇಲಿನ ದೌರ್ಜನ್ಯಗಳನ್ನು ತಡೆಯಲು ಹಿಂದೂ ಸಂಘಟನೆಗಳು ಒಗ್ಗೂಡಿ ಸರ್ಕಾರದ ಮೇಲೆ ಒತ್ತಡ ತರುವಂತಹ ಬಲಿಷ್ಠ ಪ್ರಭಾವಿ ತಂಡದ ನಿರ್ಮಾಣವು ಅನಿವಾರ್ಯವಾಗಿದೆ. ಎಲ್ಲಾ ಸಂಘಟನೆಗಳು ತಮ್ಮದೇ ಆದ ರೀತಿಯಲ್ಲಿ ಕಾರ್ಯವನ್ನು ಮಾಡುತ್ತಿವೆ. ಆದರೆ, ಅವಶ್ಯಕತೆಗನುಸಾರ ಕೆಲವು ಸಂದರ್ಭಗಳಲ್ಲಿ ಎಲ್ಲ ಸಂಘಟನೆಗಳು ಒಟ್ಟಾಗಿ ಆಂದೋಲನ ಮಾಡಬೇಕಾಗುತ್ತದೆ. ಆ ಸಂದರ್ಭದಲ್ಲಿ ಎಲ್ಲಾ ಸಂಘಟನೆಗಳು ‘ಹಿಂದೂ ರಾಷ್ಟ್ರ ಸಮನ್ವಯ ಸಮಿತಿ’ಯ ಅಡಿಯಲ್ಲಿ ಒಂದಾಗಲು ನಿರ್ಧರಿಸಲಾಯಿತು. ಅಲ್ಲದೆ, ಸರ್ಕಾರದ ಜೊತೆ ಹಿಂದೂಗಳ ಬೇಡಿಕೆಗಳನ್ನು ಸಮನ್ವಯಗೊಳಿಸಲು ಈ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಮೂಲಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಹಿಂದೂ ಜಾಗರಣ ವೇದಿಕೆಯ ಶ್ರೀ ರಾಧಾಕೃಷ್ಣ ಅಡ್ಯಂತಾಯ, ಸಂಸ್ಕಾರ ಭಾರತಿ ಗೌರವಾಧ್ಯಕ್ಷರಾದ ಶ್ರೀ ಅಶೋಕ್ ಶೆಟ್ಟಿ, ಹಿಂದೂ ಯುವ ಸೇನೆಯ ಶ್ರೀ ಜನಾರ್ಧನ ಆರ್ಕುಲ, ಹಿಂದೂ ಸೇವಾ ಸಮಿತಿಯ ಶ್ರೀ ಸುರೇಂದ್ರ ಮತ್ತು ಶ್ರೀ. ಯೋಗೀಶ್, ಬಜರಂಗದಳದ ಶ್ರೀ ಮಿಥುನ್ ಪೂಜಾರಿ, ಹಿಂದೂ ಮಹಾಸಭಾದ ಶ್ರೀ ಎಲ್ ಕೆ ಸುವರ್ಣ ಮತ್ತು ಶ್ರೀ ರಾಜೇಶ್ ಪವಿತ್ರನ್, ಉದ್ಯಮಿಗಳಾದ ಶ್ರೀ ಸತೀಶ್ ಶೆಟ್ಟಿ, ಶ್ರೀ ಎಂ. ಜೆ. ಶೆಟ್ಟಿ, ಶ್ರೀ ಪ್ರಶಾಂತ್ ಕಂಚನ್ ಇನ್ನಿತರರು ಉಪಸ್ಥಿತರಿದ್ದರು.

ವರದಿ ಚಂದ್ರಶೇಖರ ಹೆಬ್ಬಾರ್ ಕೊಲ್ಯ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!