ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿಕ್ಷಣ ಕ್ಷೇತ್ರಕ್ಕೆ ಪ್ರಿಯಾಂಕ್ ಖರ್ಗೆ ಅಪಾರ ಕೊಡುಗೆ ನೀಡಿದ್ದಾರೆ; ಬಬ್ಲು

ಕಲಬುರಗಿ/ ಚಿತ್ತಾಪುರ : ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಾಮಾಣಿಕ ಹಾಗೂ ಪ್ರಬುದ್ಧ ರಾಜಕರಣಿ ಯಾಗುವುವುದರ ಜೊತೆಗೆ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶೇಖ ಬಬ್ಲು ಹೇಳಿದರು.
ಪಟ್ಟಣದ ಬಿಆರ್’ಸಿ ಕಚೇರಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ-ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ 47ನೇ ಜನ್ಮದಿನದ ಪ್ರಯುಕ್ತ ಗೆಳೆಯರ ಬಳಗದ ವತಿಯಿಂದ ಸಂವಿಧಾನ ಓದು ವಿದ್ಯಾರ್ಥಿ ಯುವಜನರಿಗಾಗಿ ಕೈಪಿಡಿ‌ ವಿತರಿಸಿ ಮಾತನಾಡಿದ ಅವರು, ಚಿತ್ತಾಪುರ ಮತಕ್ಷೇತ್ರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿದ ಪ್ರಿಯಾಂಕ್ ಖರ್ಗೆ ಅವರು ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡುವುದರ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿ ಶೈಕ್ಷಣಿಕ ಕ್ಷೇತ್ರಕ್ಕೆ ಅತೀ ಹೆಚ್ಚು ಅನುದಾನ ಬಿಡುಗಡೆ ಮಾಡಿ ಸೌಲಭ್ಯವನ್ನು ಕಲ್ಪಿಸುತ್ತಿರುವ ರಾಜ್ಯದ ಏಕೈಕ ನಾಯಕರಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕೆನ್ನುವ ಉದ್ದೇಶದಿಂದ ಸಚಿವರು ಗ್ರಂಥಾಲಯಗಳಿಗೆ ಉಚಿತವಾಗಿ ಪುಸ್ತಕಗಳನ್ನು ನೀಡಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಸಹ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ 1000 ಸಂವಿಧಾನ ಓದು ಪುಸ್ತಕಗಳನ್ನು 49 ಸರ್ಕಾರಿ ಪ್ರೌಢ ಶಾಲೆಗಳಿಗೆ, ಸಮಾಜ ಕಲ್ಯಾಣ ಇಲಾಖೆಗೆ 100 ಪುಸ್ತಕಗಳು, ತಾ. ಪಂ. ಅಡಿಯಲ್ಲಿ ಬರುವ ಅರಿವು ಕೇಂದ್ರಗಳಿಗೆ 300 ಹಾಗೂ ಅಲ್ಪಸಂಖ್ಯಾತ ಇಲಾಖೆಗೆ 100 ಪುಸ್ತಕಗಳನ್ನು ಉಚಿತವಾಗಿ ವಿತರಣೆ ಮಾಡಿದರು.

ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಮಹ್ಮದ್ ಶರೀಫ್, ರಫೀಕ್ ಲಿಂಕ್, ಎಂ. ಎ. ನಯೀಮ್, ಸೀರಾಜ್, ರಾಜು ಸಾಹುಕಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

ವರದಿ ಮೊಹಮ್ಮದ್ ಅಲಿ ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!