
ಬಳ್ಳಾರಿ / ಕಂಪ್ಲಿ : ಪಟ್ಟಣದಲ್ಲಿ ಇಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದ ಅಡಿಯಲ್ಲಿ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಸಂವಿಧಾನ ದಿನವನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಚಾರ್ಯರಾದ ಡಾ. ಶ್ರೀನಿವಾಸ ರೆಡ್ಡಿ ಬಿ. ಮಾತನಾಡಿ ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವ ತಿಳಿಸುತ್ತಾ ,ಡಾ. ಬಿ.ಆರ್ ಅಂಬೇಡ್ಕರ್ ಅವರ ಕೊಡುಗೆಗಳನ್ನು ಸ್ಮರಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಾಜ್ಮಾ ಟಿ.ಎಮ್.ಆರ್. ಅವರು ಭಾರತ ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಿದರು, ಜೊತೆಗೆ ಜನಸಾಮಾನ್ಯರಲ್ಲಿ ಭಾರತದ ಸಂವಿಧಾನದ ಮಹತ್ವ ಕುರಿತು ಅರಿವು ಮೂಡಿಸುವುದಕ್ಕಾಗಿ ದಿನಾಂಕ 26.11.2025 ರಿಂದ 30.11.2025 ರವರೆಗೆ ಆಯೋಜಿಸಿರುವ ಆನ್ಲೈನ್ ರಸಪ್ರಶ್ನೆ (E-Quiz) ಕಾರ್ಯಕ್ರಮದ ಬಗ್ಗೆ ವಿದ್ಯಾರ್ಥಿಗಳಿಗೆ ಹೇಳುತ್ತಾ ಪ್ರತಿಯೊಬ್ಬರು (ಸಾರ್ವಜನಿಕರು) ಭಾಗವಹಿಸಿ https://forms.gle/TWWzhDB7yduPnpyv7
ಇ-ಪ್ರಮಾಣ ಪತ್ರವನ್ನು ಪಡೆಯಬಹುದು ಎಂದು ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಶೇಖರ್ ಬಿ., ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಕೆ. ಮಹೇಶ., ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಅನ್ನಪೂರ್ಣ ಗುಡುದೂರು., ಗ್ರಂಥಪಾಲಕರಾದ ಶ್ರೀ ಎ.ಜಿ.ವೀರಭದ್ರಪ್ಪ., ಅಧೀಕ್ಷಕರಾದ ಶ್ರೀಮತಿ ನಾಗಮ್ಮ ಬಿ., ಪ್ರಥಮ ದರ್ಜೆ ಸಹಾಯಕರಾದ ಶ್ರೀ ಸಿದ್ದಾರೂಢ., ಇತರ ಬೋಧಕ & ಬೋಧಕೇತರ ಸಿಬ್ಬಂದಿ ಮತ್ತು ಮಹಾವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















