
ಶಿವಮೊಗ್ಗ: ಜನ ಶಿಕ್ಷಣ ಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು. ನಂತರ ಜನ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಎಸ್.ವೈ. ಅರುಣಾದೇವಿ ಅವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿದ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ನ್ಯಾಯದ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿ ವರ್ಗ, ಸಂಯೋಜಕ ವ್ಯಕ್ತಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್




















