ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡರೆ, ಮುಂದಿನ ಪೀಳಿಗೆ ಮಕ್ಕಳಿಗೆ ಅನುಕೂಲ : ವಿರುಪಾಕ್ಷಿ

ಬಳ್ಳಾರಿ / ಕಂಪ್ಲಿ : ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡರೆ, ಮುಂದಿನ ಪೀಳಿಗೆಯ ಮಕ್ಕಳಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ. ಎನ್. ಗಣೇಶ ಅವರ ಆಪ್ತ ಸಹಾಯಕ ವಿರುಪಾಕ್ಷಿ ಹೇಳಿದರು.
ಕಾರ್ಮಿಕ ಇಲಾಖೆ ವತಿಯಿಂದ ಪಟ್ಟಣದ ಶಾಸಕರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕಾರ್ಮಿಕರಿಗೆ ಸುರಕ್ಷಾ ಕಿಟ್ ವಿತರಿಸಿ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ಎಲ್ಲಾ ಕಾರ್ಮಿಕ ವರ್ಗಕ್ಕೂ ಸೌಲಭ್ಯ ನೀಡಲಾಗುತ್ತಿದೆ. ಬಡ ಕಾರ್ಮಿಕ ವರ್ಗದ ರಕ್ಷಣೆ ಸರಕಾರದ ಉದ್ದೇಶ. ಹಿಂದೆ ಇಷ್ಟೊಂದು ಪ್ರಮಾಣದಲ್ಲಿ ಕಾರ್ಮಿಕರಿಗೆ ಸೌಲಭ್ಯ ನೀಡುತ್ತಿರಲಿಲ್ಲ, ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಬಡವರ್ಗದ ಜನತೆ ನೆಮ್ಮದಿಯ ಜೀವನ ನಡೆಸುವಂತಾಗಿದೆ. ಕಾರ್ಮಿಕ ಇಲಾಖೆಯ ಕಟ್ಟಡ ಕಾರ್ಮಿಕರಿಗೆ ನೆರವಾಗಲು ರಾಜ್ಯ ಸರ್ಕಾರ ಕಿಟ್ ನೀಡುತ್ತಿದೆ, ಸದುಪಯೋಗ ಪಡಿಸಿಕೊಳ್ಳಬೇಕು ಸರ್ಕಾರ ಬಡವರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಅವರಿಗೆ ಕಿಟ್ ನೀಡುತ್ತಿದೆ. ಸರಕಾರ ಬಡವರ ಪರ ಯೋಜನೆಗಳನ್ನು ಜಾರಿಗೊಳಿಸಿದೆ. ಸರಕಾರದ ಪ್ರತಿಯೊಂದು ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುತ್ತಿರುವುದು ಸಂತಸದ ವಿಚಾರ’’ ಎಂದರು.
ಕಾರ್ಮಿಕ ಇಲಾಖೆಯ ನಿರೀಕ್ಷಕ ಶಿವಶಂಕರ್ ತಳವಾರ ಮಾತನಾಡಿ, ಮಾನ್ಯ ಶಾಸಕರ ನಿರ್ದೇಶನದಂತೆ 150 ಮೇಸ್ತ್ರಿ, ಎಲೆಕ್ಟ್ರಿಕಲ್ 40, ಸ್ಲಂಬರ್ 10, ಕಾರ್ಪೇಂಟರ್ 30, ವೆಲ್ಡರ್ 10 ಸೇರಿದಂತೆ ಒಟ್ಟು 270 ಸರುಕ್ಷತಾ ಕಿಟ್ ವಿತರಿಸಲಾಗಿದ್ದು, ಇದರ ಸದುಪಯೋಗದೊಂದಿಗೆ ಕಾರ್ಮಿಕರು ಒಳ್ಳೆಯ ಬದುಕು ಕಟ್ಟಿಕೊಳ್ಳಬೇಕು ಎಂದರು.
ಕರ್ನಾಟಕ ರಾಜ್ಯ ಶ್ರಮಜೀವಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಕುಮಾರಗೌಡ ಮಾತನಾಡಿ, ಕಂಪ್ಲಿ ತಾಲೂಕಿನಲ್ಲಿ 6300 ಜನ ಕಾರ್ಮಿಕರಿದ್ದು, ಅಲ್ಪಸ್ವಲ್ಪ ಕಿಟ್ ನೀಡಿದರೆ ಸಮಸ್ಯೆ ತಲೆದೋರುತ್ತದೆ ಆದ್ದರಿಂದ ಕಿಟ್ ನೀಡಬೇಕಾದರೆ ತಾಲೂಕಿನಲ್ಲಿರುವ ಎಲ್ಲಾ ಕಾರ್ಮಿಕರಿಗೆ ಕಿಟ್ ನೀಡಬೇಕು ಎಂದರು.
ತದ ನಂತರ ಸ್ಮಾರ್ಟ್ ಕಾರ್ಡ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಂಪ್ಲಿ ಕಾರ್ಮಿಕರ ನಿರೀಕ್ಷಕರ ಕಛೇರಿ ಕಂಪ್ಯೂಟರ್ ಆಪರೇಟರ್ ವಿಘ್ನೇಶ್, ಸಿಐಟಿಯು ತಾಲೂಕು ಅಧ್ಯಕ್ಷ ಎ. ಹೊನ್ನೂರಸಾಬ್, ಕಾರ್ಯದರ್ಶಿ ನಾಗರಾಜ, ಕಾರ್ಯದರ್ಶಿ ಜಿ. ಸುರೇಶ ಸೇರಿದಂತೆ ಕಾರ್ಮಿಕರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!