ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅತಿಥಿ ಉಪನ್ಯಾಸಕ ಮಾಸಿಕ ಗೌರವಧನ ಹೆಚ್ಚಿಸುವಂತೆ, ಸೇವಾ ಹಿರಿತನ ಪರಿಗಣಿಸಲು ಸರ್ಕಾರದ ಗಮನ ಸೆಳೆಯುವಂತೆ ಕಂಪ್ಲಿಯಲ್ಲಿ ಶಾಸಕ ಜೆ.ಎನ್.ಗಣೇಶ ಮನವಿ ಸಲ್ಲಿಕೆ

ಬಳ್ಳಾರಿ / ಕಂಪ್ಲಿ : ಅತಿಥಿ ಉಪನ್ಯಾಸಕ ಮಾಸಿಕ ಗೌರವ ಧನವನ್ನು 14ರಿಂದ 30 ಸಾವಿರ ರೂ. ಗಳಿಗೆ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಗಳ ಈಡೇರಿಕೆಗಾಗಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದು ಧ್ವನಿ ಎತ್ತುವಂತೆ ಆಗ್ರಹಿಸಿ ಕಂಪ್ಲಿಯಲ್ಲಿ ಶಾಸಕ ಜೆ.ಎನ್.ಗಣೇಶ್ ಅವರಿಗೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಮನವಿ ಪತ್ರವನ್ನು ಸಲ್ಲಿಸಿದರು.
ಸಂಘಟನೆಯ ಜಂಟಿ ಕಾರ್ಯದರ್ಶಿ ಎಸ್.ಜಿ.ನಾಗರತ್ನ ಮಾತನಾಡಿ, ಸೇವಾ ಹಿರಿತನ ಪರಿಗಣಿಸಿ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮುಂದುವರೆಸಬೇಕು, ಅತಿಥಿ ಉಪನ್ಯಾಸಕಿರಿಗೆ ಹೆರಿಗೆ ಸಂದರ್ಭದಲ್ಲಿ ಸರ್ಕಾರಿ ಉಪನ್ಯಾಸಕಿಯರಿಗೆ ಸಿಗುವ ಸೌಲಭ್ಯಗಳನ್ನು ಕಲ್ಪಿಸಬೇಕು. ಕಾರ್ಯಭಾರ ಕಡಿಮೆ ಇರುವ ಕಾಯಂ ಉಪನ್ಯಾಸಕರನ್ನು ನಿಯೋಜಿಸಬೇಕು ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ವಿದ್ಯಾರ್ಥಿಗಳ ದಾಖಲಾತಿ ಕಾಲೇಜಿನ ಕೆಲಸಗಳನ್ನು ನಿರ್ವಹಿಸುವದರೊಂದಿಗೆ ಉತ್ತಮ ಫಲಿತಾಂಶ ಪಡೆಯುವಲ್ಲಿ ಅತಿಥಿ ಉಪನ್ಯಾಸಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಶಾಸಕ ಜೆ.ಎನ್.ಗಣೇಶ್ ಮಾತನಾಡಿ, ಕಂಪ್ಲಿ, ಕುರುಗೋಡು ಭಾಗದ ಎಲ್ಲಾ ಅತಿಥಿ ಉಪನ್ಯಾಸಕರ ಸಭೆ ಕರೆದು ಸಮಸ್ಯೆಗಳ ಮಾಹಿತಿ ಪಡೆದು ಪರಿಹರಿಸಲು ಸಂಬಂಧಿಸಿದ ಅಧಿಕಾರಿಗಳು, ಸಚಿವರೊಂದಿಗೆ ಚರ್ಚಿಸುವೆ ಹಾಗೂ ಅಧಿವೇಶನದಲ್ಲಿ ಈ ಬಗ್ಗೆ ಸಮಗ್ರವಾಗಿ ಪ್ರಸ್ತಾಪಿಸುವುದಾಗಿ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಬಿ.ಕ.ಜಡೆಪ್ಪ, ಕಾಶೀಮಪ್ಪ, ಅಂಗಡಿ ನಿರಂಜನ, ಗಜೇಂದ್ರ. ಜಿ.ಶಿವಕುಮಾರ್ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!