ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳು ಯಶಸ್ವಿ

ಸಿಂಧನೂರು : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ಪ್ರಸ್ತುತ 2025-26 ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳು ಯಶಸ್ವಿಯಾಗಿ ನಡೆದವು.
ನಗರದ ಬಾಲಕರ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರಸ್ತುತ ಸಾಲಿನ ಸ್ಪರ್ಧೆಯಲ್ಲಿ ತಾಲೂಕಿನ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ಭಾಗವಹಿಸಿದ್ದರು.
ತಾಲೂಕ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ಹಿರೇಮಠ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಮಾನಮ್ಮ ರಾಮದಾಸ್ ನಾಯಕ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷ ಬಸವರಾಜ ಮಾತನಾಡಿದರು.
ಬಾಲಕರ ಸರ್ಕಾರಿ ಪ್ರೌಢಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ರವೀಂದ್ರ ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿದರು .
ಶಿಕ್ಷಣ ಸಂಯೋಜಕರು ಹಾಗೂ ಕಾರ್ಯಕ್ರಮ ನೋಡಲ್ ಅಧಿಕಾರಿಗಳಾದ ಕುಮಾರಸ್ವಾಮಿ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯ ಮೇಲೆ ಸಿ.ಆರ್.ಪಿ-ಬಿ.ಆರ್.ಪಿ ಸಂಘದ ಅಧ್ಯಕ್ಷ ಬಸವರಾಜ ಅಂಗಡಿ, ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ ವಿಠಲ, ಚಿತ್ರಕಲಾ ಶಿಕ್ಷಕರ ಸಂಘದ ಪಿಎಲ್ ಪಾತ್ರೋಟಿ, ಜಿಪಿಟಿ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಬಸವರಾಜ, ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಚನ್ನಬಸವ, ಬಿ.ಆರ್.ಪಿಗಳಾದ ಬಸವರಾಜ ಆನೆಗುಂದಿ, ನಾಗಪ್ಪ ಕೆಲ್ಲೂರು, ಮೈನುದ್ದೀನ್ , ಶಿಕ್ಷಣ ಸಂಯೋಜಕರಾದ ಹನುಮಂತಪ್ಪ ನಾಯ್ಕರ್ , ಹುಲುಗಪ್ಪ, ಜಿಪಿಟಿ ಸಂಘದ ತಾಲೂಕ ಅಧ್ಯಕ್ಷ ಹನುಮೇಶ, ನಿರ್ಣಾಯಕರಾಗಿ ತುಳಸಿದಾಸ, ವೀರೇಶ ಗೋನವಾರ, ವೀರೇಶ ಸಾಲಿಮಠ, ದುರುಗಪ್ಪ ಗುಡದೂರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಶಿಕ್ಷಕ ಅಮರೇಶ ಹೂಗಾರ್ ಪ್ರಾರ್ಥಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ವೀರೇಶಪ್ಪ ಕಾರ್ಯಕ್ರಮ ನಿರೂಪಿಸಿದರು, ಶಿಕ್ಷಕ ರಾಮದಾಸ ನಾಯಕ್ ವಂದಿಸಿದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!