ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಸ್ ಎಸ್ ಎಲ್ ಸಿ ಮಕ್ಕಳಿಗಾಗಿ 3 ತಿಂಗಳ ಉಚಿತ ಟ್ಯೂಷನ್ ತರಗತಿ ಕಾರ್ಯಕ್ರಮ

ಬೆಳಗಾವಿ/ ಮಲ್ಲಮ್ಮನ ಬೆಳವಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಬಿ ಸಿ. ಟ್ರಸ್ಟ್ (ರಿ.), ಬೈಲಹೊಂಗಲ ಇವರ ವತಿಯಿಂದ ಎಂ ಆರ್ ಪಾಟೀಲ್ ಸರ್ಕಾರಿ ಪ್ರೌಢ ಶಾಲೆ, ಬೆಳವಡಿಯಲ್ಲಿ ಎಸ್ ಎಸ್ ಎಲ್ ಸಿ ಮಕ್ಕಳಿಗಾಗಿ 3 ತಿಂಗಳ ಉಚಿತ ಟ್ಯೂಷನ್ ತರಗತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಬೆಳಗಾವಿ 1 ಜಿಲ್ಲಾ ಜನಜಾಗೃತಿ ಸದಸ್ಯರಾದ ವಿಠ್ಠಲ್ ಪಿಸೆ, ಶಾಲೆಯ ಮುಖ್ಯೋಪಾಧ್ಯಾಯರು, ಶಾಲೆಯ sdmc ಸದಸ್ಯರು, ಶಾಲೆಯ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಉದ್ಘಾಟನೆ ನೆರವೇರಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾದ ಶ್ರೀ ವಿಠ್ಠಲ್ ಪಿಸೆ ಅವರು ವಿದ್ಯಾರ್ಥಿಗಳು ಯಾವುದೇ ಸಂದರ್ಭದಲ್ಲಿಯೂ ಎದೆಗುಂದದೆ ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿ ಮೇಲ್ದರ್ಜೆಯಲ್ಲಿ ಉತ್ತೀರ್ಣರಾಗಬೇಕೆಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಬೆಳವಡಿ ವಲಯದ ಮೇಲ್ವಿಚಾರಕರಾದ ಶ್ರೀ ಕೆ ಟಿ ಸಂತೋಷ ಅವರು ಗ್ರಾಮಾಭಿವೃದ್ಧಿ ಸಂಸ್ಥೆಯ ಶಿಕ್ಷಣ ಬಲವರ್ಧನೆನಗಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ಮಾಹಿತಿ ನೀಡಿದರು. ಕುಮಾರಿ ಲಕ್ಷ್ಮಿ ಕುರಿ ಪ್ರಾರ್ಥಿಸಿದರು. ಶ್ರೀ ಕಾರ್ಯಕ್ರಮದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀ ಈರಪ್ಪ ಮುರಾರಿ ಹಾಗೂ ಸದಸ್ಯರಾದ ಶ್ರೀ ಶಶಿಧರ ಪತ್ತಾರ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಸಂಸ್ಥೆ ನೀಡುತ್ತಿರುವ ಈ ಶೈಕ್ಷಣಿಕ ಸವಲತ್ತನ್ನು ಬಳಸಿಕೊಂಡು ಮಕ್ಕಳು ಉತ್ತಮ ದರ್ಜೆಯಲ್ಲಿ ಪಾಸಾಗಿ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಲು ಸಲಹೆ ನೀಡಿದರು. ಎಂ ಡಿ ಬಾವಾಖಾನ ಕಾರ್ಯಕ್ರಮ ನಿರೂಪಿಸಿದರು. ಶ್ರೀ ಆರ್ ಎಸ್ ಹಾಲನ್ನವರ ವಂದಿಸಿದರು.

ವರದಿ : ಉಮೇಶ ಗೌಡರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!