ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿವಿಧ ಕಾಮಗಾರಿಗಳಿಗೆ ಶಾಸಕ ಗಣೇಶ ಶಂಕುಸ್ಥಾಪನೆ

ಬಳ್ಳಾರಿ / ಕಂಪ್ಲಿ : ಪಟ್ಟಣದ ಎಂ.ಡಿ ಕ್ಯಾಂಪಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಳಿಯಲ್ಲಿ 2025-26ನೇ ಸಾಲಿನ 4217 ಯೋಜನೆಯಡಿ ಸುಮಾರು 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಸಾಮೂಹಿಕ ಶೌಚಗೃಹ ನಿರ್ಮಾಣದ ಕಾಮಗಾರಿಗೆ ಶಾಸಕ ಜೆ.ಎನ್.ಗಣೇಶ ಶಂಕುಸ್ಥಾಪನೆ ನೆರವೇರಿಸಿದರು.
ನಂತರ ಇಲ್ಲಿನ 5ನೇ ವಾರ್ಡಿನ ಇಂದಿರಾನಗರದಲ್ಲಿ ವಿದ್ಯುತ್ ಕಂಬಗಳಿಗೆ ದೀಪಗಳ ಅಳವಡಿಕೆ ಮತ್ತು ಪೇಪರ್ ಬ್ಲಾಕ್‌ಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿದರು.
ಶಾಸಕ ಗಣೇಶ ಅವರು ಪತ್ರಕರ್ತರೊಂದಿಗೆ ಮಾತನಾಡಿ, ಕಂಪ್ಲಿ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಸಿ. ಸಿ ರಸ್ತೆ, ಶೌಚಾಗೃಹ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಯೊಂದಿಗೆ ಸಕಾಲದಲ್ಲಿ ಮುಗಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಬೇಕು, ತುಂಗಭದ್ರಾ ಜಲಾಶಯದ 33 ಹೊಸ ಕ್ರಸ್ಟ್ ಗೇಟ್ ತ್ವರಿತಗತಿಯಲ್ಲಿ ಅಳವಡಿಸಬೇಕು. ರೈತರ ಜೀವನಾಡಿ ಜಲಾಶಯದಲ್ಲಿರುವ ನೀರು ಕಲುಷಿತವಾಗಿರುವ ಬಗ್ಗೆ ಹಾಗೂ ಕಂಪ್ಲಿ, ಕುರುಗೋಡು ತಾಲೂಕು ಕೇಂದ್ರದಲ್ಲಿ ಎಲ್ಲಾ ಬೆಳೆಗಳ ಶಾಶ್ವತ ಖರೀದಿ ಕೇಂದ್ರ ತೆರೆಯುವ ಬಗ್ಗೆ ಬರುವ ಚಳಗಾಲದ ಅಧಿವೇಶನದಲ್ಲಿ ಧ್ವನಿ ಎತ್ತಲಾಗುವುದು ಎಂದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಸಿ.ಆರ್.ಹನುಮಂತ, ಕೆ.ಎಸ್.ಚಾಂದ್ ಬಾಷಾ, ಲೊಡ್ಡು ಹೊನ್ನೂರವಲಿ, ವೀರಾಂಜಿನೇಯ, ಆರ್.ಆಂಜಿನೇಯ್ಯ, ಮುಖಂಡರಾದ ಕೆ.ಷಣ್ಮುಕಪ್ಪ, ಬಿ.ಸಿದ್ದಪ್ಪ, ಕೆ.ಮನೋಹರ, ಶರಣಗೌಡ, ನಾಗರಾಜ ಡೆಕೋರೇಶನ್, ಹೊನ್ನೂರಪ್ಪ, ಎನ್.ಗಂಗಣ್ಣ, ಎ.ಸಿ.ದಾನಪ್ಪ, ರಘುನಾಯಕ, ಶಶಿಕುಮಾರ ಸೇರಿದಂತೆ ಅನೇಕರಿದ್ದರು.
ಬೆಳಗೋಡಹಾಳ್ : ತಾಲೂಕಿನ ನಂ.10 ಮುದ್ದಾಪುರ ಗ್ರಾಪಂಯ ಬೆಳಗೋಡಹಾಳ್ ಗ್ರಾಮದ ಹರಿಜನ ಕಾಲೋನಿಯಲ್ಲಿ ವಿದ್ಯುತ್ ಕಂಬಗಳಿಗೆ ದೀಪಗಳ ಅಳವಡಿಕೆ ಮತ್ತು ಪೇಪರ್ ಬ್ಲಾಕ್‌ಗಳ ನಿರ್ಮಾಣ ಕಾಮಗಾರಿಗೆ ಶಾಸಕ ಗಣೇಶ ಭೂಮಿ ಪೂಜೆ ಸಲ್ಲಿಸಿದರು.
ಈ ವೇಳೆ ಗ್ರಾ. ಪಂ. ಸದಸ್ಯ ಎಸ್.ಚಂದ್ರಶೇಖರಗೌಡ, ಎಸ್ಡಿಎಂಸಿ ಅಧ್ಯಕ್ಷ ಮಲ್ಲಯ್ಯ, ಮುಖಂಡರಾದ ಡಾ.ಎ.ಸಿ.ದಾನಪ್ಪ, ಮೌಲಾಸಾಬ್, ಮೂರ್ತಿಸ್ವಾಮಿ, ಜೀರ್ ಅಯ್ಯಪ್ಪ, ಓಂಕಾರಿಗೌಡ, ವೈ.ವಿರುಪಣ್ಣ, ರಾಮಪ್ಪ ಸೊಂಗ್ಟಿ, ವಾಸು, ದೊಡ್ಡಬಸುವ, ಡಾ.ಅಜಯ, ಎನ್.ನಾಗರಾಜ, ನಬೀಸಾಬ್ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!