ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಿಸೆಂಬರ್ 13 ರಂದು ಜಗದ್ಗುರು ಶ್ರೀ ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಶತೋತ್ತರ ದಶಮಾನೋತ್ಸವ ಆಚರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ : ಹನೂರು ಶಾಸಕ ಎಂ ಆರ್ ಮಂಜುನಾಥ್.

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿ ಡಿಸೆಂಬರ್ 13ರಂದು ನಡೆಯಲಿರುವ ಜಗದ್ಗುರು ಶ್ರೀ ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಶತೋತ್ತರ ದಶಮಾನೋತ್ಸವ ಸಮಾರಂಭಕ್ಕಾಗಿ ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸುಮಾರು 10 ಸಾವಿರಕ್ಕೂ ಹೆಚ್ಚು ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.

ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದಲ್ಲಿ ಸಮಾರಂಭದ ಸಿದ್ಧತೆಗಳ ಕುರಿತು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ಮನುಕುಲದ ಒಳಿತಿಗಾಗಿ ತಮ್ಮ ಜೀವನವನ್ನೇ ಅರ್ಪಿಸಿ, ಶಿಕ್ಷಣ, ಆರೋಗ್ಯ, ಜ್ಞಾನ ಹಾಗೂ ಅನ್ನದಾಸೋಹದ ಮೂಲಕ ಕೋಟ್ಯಂತರ ಜನರಿಗೆ ಸೇವೆ ಸಲ್ಲಿಸಿದ ಸುತ್ತೂರು ಮಠದ ರಾಜೇಂದ್ರ ಮಹಾಸ್ವಾಮಿಗಳ ದಶಮಾನೋತ್ಸವ ಕಾರ್ಯಕ್ರಮವನ್ನು ಹನೂರು ಪಟ್ಟಣದ ಮಲೆಮಹದೇಶ್ವರ ಕ್ರೀಡಾಂಗಣದಲ್ಲಿ ಭವ್ಯವಾಗಿ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ತುಮಕೂರಿನ ಸಿದ್ದಗಂಗಾ ಮಠದ ಮಹಾಸ್ವಾಮೀಜಿ, ಮಹದೇಶ್ವರ ಬೆಟ್ಟದ ಸಾಲೂರು ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ದೇವನೂರು ಮಠದ ಮಹಾಂತ ಸ್ವಾಮೀಜಿ ಸೇರಿದಂತೆ ಅನೇಕ ಮಠಾಧೀಶರು ಹಾಗೂ ಗಣ್ಯರು ಆಗಮಿಸಲಿದ್ದಾರೆ,
ಇದೇ ಸಂದರ್ಭದಲ್ಲಿ ಸಚಿವ ವೆಂಕಟೇಶ್, ಸಂಸದ ಸುನಿಲ್ ಬೋಸ್, ಜಿಲ್ಲೆಯ ಹಾಲಿ ಹಾಗೂ ಮಾಜಿ ಶಾಸಕರು, ಸಮಾಜಸೇವಕರು ಮತ್ತು ವಿವಿಧ ವರ್ಗದ ಗಣ್ಯರು ಭಾಗವಹಿಸಲಿದ್ದಾರೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಾರ್ವಜನಿಕರ ಸಹಕಾರ ಅತಿ ಮುಖ್ಯ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ರಾಜೇಂದ್ರ ಶ್ರೀಗಳ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಮನವಿ ಮಾಡಿದರು.

ಈ ಸಮಾರಂಭದ ಯಶಸ್ಸಿಗಾಗಿ ಈಗಾಗಲೇ ವಿವಿಧ ಪಕ್ಷಗಳ ನಾಯಕರು, ಮಾಜಿ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಗಣ್ಯರು ಕೈ ಜೋಡಿಸಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ರೈತ ಸಂಘದ ಮುಖಂಡರು ರಕ್ತದಾನ ಶಿಬಿರವನ್ನು ಆಯೋಜಿಸಲು ತೀರ್ಮಾನಿಸಿರುವುದು ಸಂತೋಷಕರ ಬೆಳವಣಿಗೆ ಎಂದೂ ಅವರು ಶ್ಲಾಘಿಸಿದರು.

ಪತ್ರಿಕಾಗೋಷ್ಠಿಯ ಅಂತ್ಯದಲ್ಲಿ, ಕೆಲವು ಪತ್ರಕರ್ತರು ಚಾಮರಾಜನಗರ ಜಿಲ್ಲೆಯ ನೂತನ ತಾಲೂಕು ಕೇಂದ್ರವಾದ ಹನೂರು ಪಟ್ಟಣದಲ್ಲಿ ಜೆಎಸ್ಎಸ್ ಸಂಸ್ಥೆಯಿಂದ ಆಸ್ಪತ್ರೆ ಅಥವಾ ಶಿಕ್ಷಣ ಕೇಂದ್ರವನ್ನು ಸ್ಥಾಪಿಸಲು ತಮ್ಮ ನೇತೃತ್ವದಲ್ಲಿ ಮನವಿ ಸಲ್ಲಿಸುವಂತೆ ಶಾಸಕರಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಚಾಮುಲ್ ಮಾಜಿ ಅಧ್ಯಕ್ಷ ಗುರುಮಲ್ಲಪ್ಪ ಹಾಲಿ ನಿರ್ದೇಶಕ ಉದ್ದನೂರು ಪ್ರಸಾದ್ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಸೊಮ್ಮಣ್ಣ ಸೇರಿದಂತೆ ಕಣ್ಣೂರು ಬಸವರಾಜಪ್ಪ ಶಾಗ್ಯ ಬಾಬಣ್ಣ ಮುರುಡೇಶ್ವರ್ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ರಾಜಶೇಖರ್ ಮೂರ್ತಿ ಹಾಗೂ ಕನ್ನಡಪರ ಹೋರಾಟಗಾರ ವಿನೋದ್ ಹಾಜರಿದ್ದರು.

ವರದಿ :ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!