ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭುವನೇಶ್ವರಿ ದೇವಿಯನ್ನು ನಾಡ ದೇವತೆಯಾಗಿ ಘೋಷಣೆ ಮಾಡಲು ಮನವಿ

ಮೈಸೂರು: ಕರ್ನಾಟಕ ರಾಜ್ಯದ ನಾಡ ದೇವತೆಯಾಗಿ ಕನ್ನಡ ತಾಯಿ ಭುವನೇಶ್ವರಿ ದೇವಿಯನ್ನು ಅಧಿಕೃತವಾಗಿ ಘೋಷಣೆ ಮಾಡುವಂತೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಕೋರಿದ್ದಾರೆ.

ಪ್ರಸ್ತುತ ಚಾಮುಂಡೇಶ್ವರಿ ದೇವಿಯನ್ನು ನಾಡ ದೇವತೆಯಾಗಿ ಕರೆಯಲಾಗುತ್ತಿದೆ ಆದರೆ ಚಾಮುಂಡೇಶ್ವರಿ ದೇವಿಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ( ಬೀದರ್ ನಿಂದ ಚಾಮರಾಜನಗರ ) ವರೆಗೂ ಹೆಚ್ಚಾಗಿ ಪೂಜಿಸುವುದು ಕಡಿಮೆ ಸುಮಾರು ನಾಲ್ಕು, ಐದು, ಜಿಲ್ಲೆಗಳಲ್ಲಿ ಹೆಚ್ಚಾಗಿ ಪೂಜಿಸುತ್ತಾರೆ.
ಅಖಂಡ ಕರ್ನಾಟಕದಾದ್ಯಂತ ಕನ್ನಡಿಗರು ಕನ್ನಡ ತಾಯಿ ಭುವನೇಶ್ವರಿ ದೇವಿಯನ್ನು ಪೂಜಿಸಿ ಆರಾಧಿಸುತ್ತಿದ್ದಾರೆ, ರಾಜ್ಯ ಸರ್ಕಾರ ವಿಧಾನ ಸೌಧದಲ್ಲಿ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭವ್ಯ ಪ್ರತಿಮೆ ಯನ್ನು ಸ್ಥಾಪಿಸಿರುವುದೇ ಸಾಕ್ಷಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ ಈಗಾಗಲೇ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕನಾಗಿ ವಿಶ್ವ ಗುರು ಬಸವಣ್ಣ ನವರನ್ನು ಅಧಿಕೃತವಾಗಿ ಘೋಷಣೆ ಮಾಡಿದೆ
ಆದ ಕಾರಣ ರಾಜ್ಯ ಸರ್ಕಾರ ಈ ಮೇಲಿನ ಎಲ್ಲಾ ಅಂಶಗಳನ್ನು ಸೂಕ್ಷ್ಮವಾಗಿ ಪರಿಗಣಿಸಿ ಕೂಡಲೇ ನಾಡ ದೇವತೆಯಾಗಿ ಭುವನೇಶ್ವರಿ ದೇವಿಯನ್ನು ಅಧಿಕೃತವಾಗಿ ಘೋಷಣೆ ಮಾಡಬೇಕು ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!