ಯಾದಗಿರಿ/ ಗುರುಮಠಕಲ್: ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಾಳೆ ದಿ. 09-12-2025 ಮಂಗಳವಾರ ಬೆಳಿಗ್ಗೆ 11 ಗಂಟೆಗೆ ತಾಲೂಕ ಪಂಚಾಯತ ಕಾರ್ಯನಿರ್ವಾಹಕರ ಅಧಿಕಾರಿ ಅಂಬರೀಷ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ವಿಕಲಚೇತನರ ಕುಂದುಕೊರತೆ ಸಭೆ ಕರೆಯಲಾಗಿದೆ,
ತಾಲೂಕಿನ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ವಿಕಲಚೇತನರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಹಂಚಿಕೊಂಡು ಬಗೆಹರಿಸಿಕೊಳ್ಳಲು R.P.D ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರಾದ ಸಿದ್ದಣ್ಣ ಗೌಡ ಪಾಟೀಲ್ ಮನವಿ ಮಾಡಿದ್ದಾರೆ.
ವರದಿ: ಜಗದೀಶ್ ಕುಮಾರ್ ಭೂಮಾ.




















