ಬೆಳಗಾವಿ ಜಿಲ್ಲೆಯ ಬೈಲಹೊಂಗಲ ವ್ಯಾಪ್ತಿಯಲ್ಲಿನ ಬೀದಿನಾಯಿಗಳನ್ನು ದತ್ತು ಪಡೆದು ಅವುಗಳನ್ನು
ಪೋಷಣೆ ಮಾಡಲು ಇಚ್ಚಿಸುವವರು, ಪ್ರಾಣಿಗಳ ಸಂರಕ್ಷಣೆ ಸಂಕಲ್ಪ ಹೊಂದಿರುವವರು,
ಪ್ರಾಣಿಗಳ ಮೇಲೆ ದಯೆ ಇರುವವರು ಬೀದಿನಾಯಿಗಳನ್ನು ದತ್ತು ಪಡೆಯಲು ಅಥವಾ ಆಶ್ರಯ ತಾಣದಲ್ಲಿರುವ ಬೀದಿನಾಯಿಗಳಿಗೆ ಆಹಾರ ಪೂರೈಸಲು ಇಚ್ಚಿಸುವವರು ಇದ್ದಲ್ಲಿ ಕೂಡಲೇ
ಬೈಲಹೊಂಗಲ ಪುರಸಭೆ ಕಾರ್ಯಾಲಯಕ್ಕೆ ಸಂಪರ್ಕಿಸಬಹುದಾಗಿದೆ. ಬೀದಿನಾಯಿಗಳಿಂದ
ಸಾರ್ವಜನಿಕರಿಗೆ ಹಾಗೂ ಸಂಚರಿಸುವ ವಾಹನದಾರರಿಗೆ ಆಗುವ ತೊಂದರೆಯನ್ನು ನಿಯಂತ್ರಿಸಲು ಪುರಸಭೆ ವತಿಯಿಂದ ಹಿಡಿದು ಅವುಗಳನ್ನು ಆಶ್ರಯ ತಾಣಕ್ಕೆ ಸಾಗಿಸಲಾಗುತ್ತಿದೆ.
ಹಾಗಾಗಿ ಎನ್.ಜಿ.ಓ ಸಂಘ ಸಂಸ್ಥೆಗಳು, ಪ್ರಾಣಿದಯಾ ಸಂಘಗಳು ಹಾಗೂ ಇತರೆ ಪ್ರಾಣಿ ಪ್ರಿಯರಿದ್ದಲ್ಲಿ ಪುರಸಭೆ ಕಾರ್ಯಾಲಯಕ್ಕೆ ಸಂಪರ್ಕಿಸಬಹುದು ಎಂದು ಪುರಸಭೆಯ ಮುಖ್ಯಾಧಿಕಾರಿ ಶ್ರೀ ವೀರೇಶ ಹಸಬಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ ಮಂಜು ಎಂ. ಚಿಕ್ಕಣ್ಣವರ



















