
ಚಾಮರಾಜನಗರ/ ಹನೂರು : ಪಟ್ಟಣದ ಸೆಸ್ಕಾಂ ಕಚೇರಿ ಮುಂಭಾಗ ಡಿಸೆಂಬರ್ 12 ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಜನ ಸಂಪರ್ಕ ಸಭೆಯನ್ನು ಆಯೋಜಿಸಿದ್ದು ವಿದ್ಯುತ್ ಸಂಬಂಧಿತ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡುಕೊಳ್ಳುವಂತೆ ಹನೂರು ಉಪ ವಿಭಾಗದ ಎಇಇ ರಂಗಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಹನೂರು ಉಪ ವಿಭಾಗದ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಚಾಮುಂಡೇಶ್ವರಿ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವಿಭಾಗ ಕಚೇರಿ ಕೊಳ್ಳೇಗಾಲ ರವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 12ರ ಬೆಳಗ್ಗೆ 11 ಗಂಟೆಗೆ ಜನ ಸಂಪರ್ಕ ಸಭೆ ಆಯೋಜಿಸಲಾಗಿದ್ದು ಗ್ರಾಹಕರು ತಮ್ಮ ವ್ಯಾಪ್ತಿಯ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಬಗ್ಗೆ ಪರಿಹಾರ ಪಡೆದುಕೊಳ್ಳಲು ಹಾಜರಾಗುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ ಉಸ್ಮಾನ್ ಖಾನ್



















