ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮೂರು ತಿಂಗಳ ಬಾಕಿ ವೇತನ ನೀಡುವಂತೆ ಆಗ್ರಹಿಸಿ ಧರಣಿ

ಬಳ್ಳಾರಿ / ಕಂಪ್ಲಿ: ವಿವಿಧ ಬೇಡಿಕೆಗೆ ಆಗ್ರಹಿಸಿ, ಕಂಪ್ಲಿ ತಾಲೂಕು ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ತಾಲೂಕಾಧ್ಯಕ್ಷ ಡಿ. ಆರ್. ಪಾಂಡುರಂಗ ನೇತೃತ್ವದಲ್ಲಿ ನೌಕರರು ಪಟ್ಟಣದ ನೀರಾವರಿ ಇಲಾಖೆಯ ಉಪವಿಭಾಗದ ಕಚೇರಿ ಮುಂಭಾಗದಲ್ಲಿ ಒಂದು ದಿನದ ಧರಣಿ ಶುಕ್ರವಾರ ನಡೆಸಿದರು. ನಂತರ ತಾಲೂಕಾಧ್ಯಕ್ಷ ಡಿ.ಆರ್.ಪಾಂಡುರಂಗ ಮಾತನಾಡಿ, ಉಪವಿಭಾಗದ ಕಂಪ್ಲಿ ನೀರಾವರಿ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸಾಕಷ್ಟು ಜನರು ಕೆಲಸ ಮಾಡುತ್ತಿದ್ದಾರೆ. ಡಿಸೆಂಬರ್ ತಿಂಗಳ ಹಾಗೂ 2025 ಅಕ್ಟೋಬರ್ ಮತ್ತು ನವೆಂಬರ್ ತಿಂಗಳು ಸೇರಿದಂತೆ ಒಟ್ಟಾರೆಯಾಗಿ ಮೂರು ತಿಂಗಳ ಬಾಕಿ ವೇತನ ಬಾರದೇ, ನೌಕರರ ಜೀವನ ನಿರ್ವಾಹಣೆ ತುಂಬ ಕಷ್ಟಕರವಾಗಿದೆ. ಈಗಾಗಲೇ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಏನು ಪ್ರಯೋಜನೆ ಇಲ್ಲದಂತಾಗಿದೆ. ಆದ್ದರಿಂದ ಅನಿವಾರ್ಯವಾಗಿ ಧರಣಿ ಮಾಡಬೇಕಾಯಿತು. ಕೂಡಲೇ ಅಧಿಕಾರಿಗಳು ಹೊರಗುತ್ತಿಗೆ ನೌಕರರ ಸಂಕಷ್ಟವನ್ನಾಲಿಸಿ, ವೇತನ ಜಾರಿ ಮಾಡಬೇಕು. ಭವಿಷ್ಯ ನಿಧಿ, ಇಎಸ್‌ಐ ಕಟ್ಟಬೇಕು. ನಾಲ್ಕೈದು ದಿನದಲ್ಲಿ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಮುನಿರಾಬಾದ್‌ನ ಮುಖ್ಯ ಕಛೇರಿ ಬಳಿಯಲ್ಲಿ ಧರಣಿ ಮಾಡಲಾಗುವುದು. ಇದಕ್ಕೂ ಜಗ್ಗದೇ ಹೋದರೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಚಳುವಳಿ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಹೆಚ್.ಜಡೆಮೂರ್ತಿ, ಪದಾಧಿಕಾರಿಗಳಾದ ಎಂ.ಜಡೆಪ್ಪ, ಡಿ.ಸೋಮೇಶ, ಗಂಗಯ್ಯಸ್ವಾಮಿ, ಯರ‍್ರೆಪ್ಪ, ಹೆಚ್.ಗಾದೆಪ್ಪ, ಸುಂದರರಾಜ್, ಸಿ.ಡಿ.ಜಡೇಶ, ಹನುಮನಾಯಕ, ವಿರುಪಣ್ಣ, ಉಮೇಶ ಸೇರಿದಂತೆ ಅನೇಕರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!