ಯಾದಗಿರಿ/ಗುರುಮಠಕಲ್: ಹಿರಿಯ ಶಾಸಕ, ಶಾಮನೂರು ಶಿವಶಂಕರಪ್ಪ ಅವರಿಗೆ ಪಟ್ಟಣದ ಅಂಬಿಗರ ಚೌಡಯ್ಯ ವೃತ್ತದಲ್ಲಿ ಗುರುಮಠಕಲ್ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರು ನಿನ್ನೆ ದಿ.14-12-2025 ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿರುತ್ತಾರೆ.
ಅಜಾತ ಶತ್ರು, ಶಾಸಕರಾಗಿ, ಸಂಸದರಾಗಿ ರಾಜ್ಯಕ್ಕೆ ಅವರ ಕೊಡುಗೆ ಅಪಾರ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕರಾಗಿ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದು ಶಿವಾನಂದ ಬೂದಿ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷರು ಅಭಿಪ್ರಾಯ ಪಟ್ಟರು.
ಶ್ರದ್ದಾಂಜಲಿಯಲ್ಲಿ ವೀರಶೈವ ಲಿಂಗಾಯತ ಸಮಾಜದ ಸದಸ್ಯರು, ಉಪಾಧ್ಯಕ್ಷ ರವಿಕುಮಾರ್ ವಾರದ, ಮಲ್ಲಿಕಾರ್ಜುನ ಸ್ವಾಮಿ ವಸ್ತ್ರದ, ಕಾರ್ಯದರ್ಶಿ ಜಗದೀಶ್ ಕುಮಾರ್ ಭೂಮಾ, ಶಿವಕುಮಾರ ಗದ್ವಾಲ್, ಮಾಜಿ ಅಧ್ಯಕ್ಷರಾದ ನಾಗಭೂಷಣ ಅವಂಟಿ ಹಾಗೂ ಮಲ್ಲಿಕಾರ್ಜುನ ಹಿರೇಮಠ, ಸಮಾಜದ ಹಿರಿಯರಾದ ನರಸರೆಡ್ಡಿ ಪೊಲೀಸ್ ಪಾಟೀಲ ಗಡ್ಡೆಸುಗುರು, ಶರಣಪ್ಪ ಹೂಗಾರ, ನಾಗಣ್ಣ ಕಾಳಗಿ, ವಿನಯಶೇಖರ ಹಿರೇಮಠ, ಸಿದ್ದರಾಮ ಸ್ವಾಮಿ, ನಾಗೇಂದ್ರಪ್ಪ ಗದ್ವಾಲ್, ಮೋಹನ್ ರೆಡ್ಡಿ ಸೇರಿದಂತೆ ಸಾರ್ವಜನಿಕರು ಭಾಗಿಯಾಗಿದ್ದರು.
ವರದಿ: ಜಗದೀಶ್ ಕುಮಾರ್ ಭೂಮಾ



















