ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಪರಾಧ ತಡೆ ಮಾಸಾಚರಣೆ : ವಾಹನ ಸವಾರರಿಗೆ ಕಾನೂನು, ಸಂಚಾರ ನಿಯಮಗಳ ಕುರಿತು ಅರಿವು

ಯಾದಗಿರಿ/ಗುರುಮಠಕಲ್: ಡಿ.17 ಪಟ್ಟಣದ ಲಘು ಮೊಟಾರ್ ವಾಹನ ಚಾಲಕರು, ಸರಕು ಸಾಗಣೆ ವಾಹನ ಚಾಲಕರು ಹಾಗೂ ಆಟೋ ಚಾಲಕರು ಸೇರಿದಂತೆ ಸಾರ್ವಜನಿಕರಲ್ಲಿ ಅಪರಾಧ ತಡೆ ಮಾಸಾಚರಣೆಯ ಭಾಗವಾಗಿ ಬುಧವಾರದಂದು ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಕಾನೂನು ಮತ್ತು ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಆರಕ್ಷಕ ನಿರೀಕ್ಷಕರಾದ ವೀರಣ್ಣ ದೊಡ್ಡಮನಿಯವರು ವಾಹನ ಚಾಲಕರನ್ನು ಉದ್ದೇಶಿಸಿ ರಸ್ತೆ ಸುರಕ್ಷತೆ, ಸಂಚಾರ ನಿಯಮ ಪಾಲನೆಯ ಅಗತ್ಯತೆ, ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಧಾರಣೆ ಕಡ್ಡಾಯ, ಮದ್ಯಪಾನ ಮಾಡಿ ವಾಹನ ಚಲಾಯಿಸುವ ಅಪಾಯ ಮತ್ತು ಕಾನೂನಾತ್ಮಕ ಪರಿಣಾಮಗಳ ಬಗ್ಗೆ ವಿವರಿಸಿದರು.

ಅಪರಾಧ ತಡೆಗೆ ಸಾರ್ವಜನಿಕರು ಪೊಲೀಸರ ಜೊತೆ ಸಹಕರಿಸಬೇಕೆಂದು ಕಾನೂನು ಜಾಗೃತಿ ಕೂಡಾ ನೀಡಲಾಯಿತು.

ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ ಶಿವರಾಮ ರೆಡ್ಡಿ, ಆಟೋ, ಲಘು ವಾಹನ, ಸರಕು ಸಾಗಣೆ ವಾಹನ ಚಾಲಕರು, ಸಾರ್ವಜನಿಕರು ಭಾಗಿಯಾದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!