ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಿಸೆಂಬರ್ 21ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ.

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಕಡ್ಡಾಯ – ಡಾ. ಬಸಗೌಡ ಕಾಗೆ ಕರೆ

ಅಥಣಿ: ಪೋಲಿಯೋ ಎಂಬ ಮಾರಕ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಿ, ದೇಶವನ್ನು ಪೋಲಿಯೋ ಮುಕ್ತವಾಗಿಸುವ ಮಹತ್ವದ ಉದ್ದೇಶದಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನವು ಡಿಸೆಂಬರ್ 21ರಿಂದ 24ರವರೆಗೆ ನಡೆಯಲಿದೆ ಎಂದು ಅಥಣಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ತಾಲೂಕು ವೈದ್ಯಾಧಿಕಾರಿಗಳಾದ ಡಾ. ಬಸಗೌಡ ಕಾಗೆ ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಅಂಗವಾಗಿ ಡಿಸೆಂಬರ್ 20ರಂದು ಅಥಣಿ ಪಟ್ಟಣದಲ್ಲಿ ಜರುಗಿದ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಥಣಿ ಹಾಗೂ ಕಾಗವಾಡ ತಾಲೂಕುಗಳನ್ನು ಒಳಗೊಂಡಂತೆ ಒಟ್ಟು 56,316 ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಅಭಿಯಾನದ ಮೊದಲ ದಿನವಾದ ಡಿಸೆಂಬರ್ 21ರಂದು ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಪಲ್ಸ್ ಪೋಲಿಯೋ ಬೂತ್‌ಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಲಾಗುವುದು. ನಂತರ ಸೋಮವಾರ ಹಾಗೂ ಮಂಗಳವಾರ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿ ಲಸಿಕೆ ಹಾಕಲಿದ್ದಾರೆ. ಬುಧವಾರ ನಗರ ಪ್ರದೇಶಗಳಲ್ಲಿ ಉಳಿದ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯ ನಡೆಯಲಿದೆ ಎಂದು ಅವರು ವಿವರಿಸಿದರು.

ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿ ಅವರು ಹಾಗೂ ಕಾಗವಾಡ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ರಾಜು ಕಾಗೆಯವರು, ಡಿಸೆಂಬರ್ 21ರಂದು ಉಗಾರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ ಎಂದು ತಿಳಿಸಲಾಯಿತು.

ಈ ಮಹತ್ವದ ಅಭಿಯಾನಕ್ಕಾಗಿ ಒಟ್ಟು 265 ಪಲ್ಸ್ ಪೋಲಿಯೋ ಬೂತ್‌ಗಳನ್ನು ಸ್ಥಾಪಿಸಲಾಗಿದ್ದು, 1060ಕ್ಕೂ ಅಧಿಕ ವ್ಯಾಕ್ಸಿನೇಟರಗಳಿದ್ದು.
ಇದಕ್ಕೆ ರೋಟರಿ ಸಂಸ್ಥೆ, ಪುರಸಭೆ, ವಿವಿಧ ಎನ್‌ಜಿಓಗಳು, ಶಾಲಾ ಶಿಕ್ಷಣ ಸಂಸ್ಥೆಗಳು, ತಾಲೂಕು ಮಟ್ಟದ ಕಚೇರಿಗಳು ಹಾಗೂ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ ಎಂದು ಡಾ. ಬಸಗೌಡ ಕಾಗೆ ಅವರು ಹೇಳಿದರು.

ಪೋಲಿಯೋ ನಿರ್ಮೂಲನೆ ಎನ್ನುವುದು ಸರ್ಕಾರದ ಹೊಣೆ ಮಾತ್ರವಲ್ಲ, ಇದು ಸಮಾಜದ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂದು ಹೇಳಿದ ಅವರು, ಐದು ವರ್ಷದೊಳಗಿನ ಪ್ರತಿಯೊಬ್ಬ ಮಕ್ಕಳಿಗೂ ಎರಡು ಹನಿ ಪಲ್ಸ್ ಪೋಲಿಯೋ ಲಸಿಕೆ ತಪ್ಪದೆ ಹಾಕಿಸಿ, ದೇಶವನ್ನು ಪೋಲಿಯೋ ಮುಕ್ತವಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೂ ಮುನ್ನ, ತಾಲೂಕು ಆರೋಗ್ಯ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ರೋಟರಿ ಸಂಸ್ಥೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ, ಡಿಸೆಂಬರ್ 20ರಂದು ಬೆಳಗ್ಗೆ ಅಥಣಿ ಸರ್ಕಾರಿ ಆಸ್ಪತ್ರೆಯಿಂದ ಜಾಗೃತಿ ಜಾಥಾ ಪ್ರಾರಂಭಿಸಲಾಯಿತು. ಪಟ್ಟಣದ ವಿವಿಧ ಭಾಗಗಳಲ್ಲಿ ಸಂಚರಿಸಿದ ಜಾಥಾ ಮೂಲಕ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ವರದಿ. ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!