ಚಾಮರಾಜನಗರ/ ಹನೂರು: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಹನಿ ಹಾಕುವ ಕಾರ್ಯಕ್ರಮಕ್ಕೆ ಶಾಸಕ ಎಂ. ಆರ್. ಮಂಜುನಾಥ್ ಚಾಲನೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪೋಲಿಯೊ ಹನಿ ಹಾಕಿಸುವ ಮೂಲಕ ಮಕ್ಕಳಲ್ಲಿ ಅಂಗವಿಕಲತೆ ಹಾಗೂ ಬೌದ್ಧಿಕ ಅಸಮರ್ಥತೆ ಉಂಟಾಗುವುದನ್ನು ತಪ್ಪಿಸುವ ಉದ್ದೇಶದಿಂದ ಆರೋಗ್ಯ ಇಲಾಖೆ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.
ಆರೋಗ್ಯ ಇಲಾಖೆ, ಅಂಗನವಾಡಿ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗುತ್ತಿದ್ದು, ಮೊದಲ ದಿನ ಬೂತ್‌ಗಳಲ್ಲಿ ಹಾಗೂ ಮುಂದಿನ ದಿನಗಳಲ್ಲಿ ಮನೆ ಮನೆಗೆ ತೆರಳಿ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಹನಿ ಹಾಕಲಾಗುತ್ತದೆ ಎಂದು ಮಾಹಿತಿ ನೀಡಿದರು.
ಐದು ವರ್ಷದೊಳಗಿನ ಮಕ್ಕಳ ಪೋಷಕರು ಈ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡುವಂತೆ ಶಾಸಕ ಎಂ. ಆರ್. ಮಂಜುನಾಥ್ ಮನವಿ ಮಾಡಿದರು.
ಇದೆ ಸಮಯದಲ್ಲಿ ತಹಶೀಲ್ದಾರ್ ಚೈತ್ರ, ವೈದ್ಯಾಧಿಕಾರಿ ರಾಜೀವ್ ಮುಖಂಡರಾದ ಚಿನ್ನವೆಂಕಟ ವಿಜಯ್ ಜಸ್ಸಿಮ್ ಅಮಿನ್ ಹಾಗೂ ಸಿಬ್ಬಂದಿ ವರ್ಗದವರು ಇದ್ದರು.
ವರದಿ ಉಸ್ಮಾನ್ ಖಾನ್




















