ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರಕ್ಕೆ ಉತ್ತಮ ಸ್ಪಂದನೆ

ತುಮಕೂರು/ ಪಾವಗಡ : ಹೆಲ್ಪ್ ಸೊಸೈಟಿ, ಸೇವಾ ಟ್ರಸ್ಟ್ ಪಾವಗಡ, ಶಂಕರ ಕಣ್ಣಿನ ಆಸ್ಪತ್ರೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ತಿರುಮಣಿಯ ಶ್ರೀ ಆಂಜನೇಯ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರವನ್ನು ದಿ. 19.12.2025 ರ ಶುಕ್ರವಾರ ಆಯೋಜಿಸಲಾಗಿತ್ತು.
ಶಿಬಿರವನ್ನು ಉದ್ದೇಶಿಷಿ ಮಾತನಾಡಿದ ತಿರುಮಣಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ವಿಜಯ್ ಕುಮಾರ್ ಗಡಿನಾಡಿನ ಜನತೆಗೆ ಉತ್ತಮ ಚಿಕಿತ್ಸೆ ನೀಡುವ ಸಲುವಾಗಿ ಯಾವುದೇ ಫಲಾಪೇಕ್ಷೆ ಇಲ್ಲದೆ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಇಂತಹ ಉತ್ತಮ ಸೇವೆ ನೀಡುತ್ತಿರುವುದು ಶ್ಲಾಘನೀಯ ಎಂದರು. ಹಾಗೂ ಈ ಒಂದು ಶಿಬಿರ ಯಶಸ್ವಿಯಾಗಿ ಆಗಲಿ ಎಂದು ಆಶಿಸಿದರು.
ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಮಾತನಾಡುತ್ತಾ ನಮ್ಮ ಸಂಸ್ಥೆ ಅರೋಗ್ಯ ಸೇವಾ ಜೊತೆಯಲ್ಲಿ ಶೈಕ್ಷಣಿಕ, ಸಾಮಾಜಿಕ ಸೇವೆಯಲ್ಲಿ ನಿರತವಾಗಿದ್ದು ಸದಾ ಜನಸೇವೆಯೇ ನನ್ನ ಏಕೈಕ ಗುರಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಿರುಮಣಿಯ ರಾಜಕೀಯ ಮುಖಂಡರಾದ ಅರುಣಪ್ಪ, ವೆಂಕಟರಮಣಪ್ಪ, ಶಂಕರ ಆಸ್ಪತ್ರೆಯ ವೈದ್ಯರಾದ ಮನ್ವಿತ್, ಶ್ರುತಿ ಹಾಗೂ ಸಂಯೋಜಕರಾದ ಹರೀಶ್, ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ್ ಉಪಸ್ಥಿತರಿದ್ದರು.
ಶಿಬಿರದಲ್ಲಿ 150 ಕ್ಕೂ ಹೆಚ್ಚು ಜನ ಪರೀಕ್ಷೆಗೆ ಒಳಪಟ್ಟಿದ್ದು 45 ರೋಗಿಗಳಿಗೆ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗೆ ಬಸ್ಸಿನಲ್ಲಿ ಕಳಿಸಿಕೊಡಲಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!