ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವ, ಜ್ಞಾನ ವಿಕಸನಕ್ಕೆ ಪ್ರತಿಭಾ ಕಾರಂಜಿ ಸಹಕಾರಿ

ಬಳ್ಳಾರಿ / ಕಂಪ್ಲಿ: ವಿದ್ಯಾರ್ಥಿಗಳ ಕಲಿಕೆಯ ಜತೆಗೆ ಪ್ರತಿಭೆಗಳಿಗೆ ಅವಕಾಶಗಳು ಒದಗಿಸಿದಾಗ ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದು ಕಂಪ್ಲಿ ವಿದ್ಯಾವರ್ಧಕ ಸಂಸ್ಥೆಯ (ಬಿ ಎಸ್ ವಿ) ಅಧ್ಯಕ್ಷ ಕಲ್ಗುಡಿ ವಿಶ್ವನಾಥ ಹೇಳಿದರು.
ಪಟ್ಟಣದ ಬಿಎಸ್ ವಿ ಶಾಲೆಯಲ್ಲಿ 8ನೇ ವಾರ್ಡಿನ ಸಮೂಹ ಸಂಪನ್ಮೂಲ ಕೇಂದ್ರದಿಂದ ಮಂಗಳವಾರ ಹಮ್ಮಿಕೊಂಡಿದ್ದ ಪ್ರತಿಭಾ ಕಾರಂಜಿ ಮತ್ತು ಕಲ್ಲೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವ, ಜ್ಞಾನ ವಿಕಸನಕ್ಕೆ ಪ್ರತಿಭಾ ಕಾರಂಜಿ ಸಹಕಾರಿಯಾಗಿದೆ. ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಕೊಡುವ ಉದ್ದೇಶದಿಂದ ಪ್ರತಿ ವರ್ಷ ಪ್ರತಿಭಾ ಕಾರಂಜಿ ಆಯೋಜಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸೋಲು ಗೆಲುವು ಎನ್ನದೆ ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ. ಇಂತಹ ಕಾರ್ಯಕ್ರಮದಿಂದ ವೇದಿಕೆಯ ಭಯ ಹೋಗಲಾಡಿಸಲು, ನಾಯಕತ್ವದ ಗುಣ, ಧೈರ್ಯಬೆಳೆಸಿಕೊಳ್ಳಲು ಉತ್ತಮ ಅವಕಾಶವಾಗಿದೆ ಎಂದರು.
ಸಿಆರ್ ಪಿ ಗಂಗಾಧರ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹ ನೀಡಿದಾಗ ಮಕ್ಕಳ ಭವಿಷ್ಯಕ್ಕೆ ದಾರಿದೀಪವಾಗುತ್ತದೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. 
ಇಲ್ಲಿ ಮಕ್ಕಳು ವೈಯಕ್ತಿಕ ಮತ್ತು ಸಾಮೂಹಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಛದ್ಮವೇಷ ಸ್ಪರ್ಧೆಯಲ್ಲಿ ಶಾರದಾ ಶಾಲೆಯ 1ನೇ ತರಗತಿಯ ಲಕ್ಷಿತಾ ಇವರು ಆದಿಯೋಗಿ ಪಾತ್ರದಲ್ಲಿ ಗಮನ ಸೆಳೆದಳು.
ಈ ಸಂದರ್ಭದಲ್ಲಿ ಉಪ ಪ್ರಾಚಾರ್ಯೆ ಸುಜಾತ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹನುಮಂತಪ್ಪ, ಇಸಿಒಗಳಾದ ರೇವಣ್ಣ, ಟಿ.ಎಂ.ಬಸವರಾಜ, ಎನ್ ಪಿಎಸ್ ನೌಕರರ ಸಂಘ ರಾಜ್ಯಾಧ್ಯಕ್ಷ ನಾಗನಗೌಡ ಎಂ.ಎ, ಸಿ ಆರ್ ಪಿ ಗಳಾದ ಕರುಣಾಕರ, ರೇಣುಕಾರಾಧ್ಯ, ಸಹ ಶಿಕ್ಷಕರಾದ ಸುನಿತಾ, ರುದ್ರಪ್ಪ, ಬಸವರಾಜ, ರಾಜು, ಶಾಮ್ ಸುಂದರ್, ಮಂಜುನಾಥ ಸೇರಿದಂತೆ ಅನೇಕರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!