ಹನೂರು: ಚಾಮರಾಜನಗರ ಜಿಲ್ಲೆಯ ರೈತರಿಗೆ 28 ಕೋಟಿ ಸಾಲ ನೀಡಿದ್ದರು, ನಾನು ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷನಾಗಿ, ನಿರ್ದೇಶಕನಾಗಿ 148 ಕೋಟಿ ಸಾಲ ಕೊಡಿಸಿ ನಮ್ಮ ಭಾಗದ ರೈತರಿಗೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಿದ್ದೇನೆ, ಇದೀಗ ಮತ್ತೊಮ್ಮೆ ನಿರ್ದೇಶಕನಾಗಿ ಆಯ್ಕೆಯಾಗಿರುವುದರಿಂದ ನಮ್ಮ ಭಾಗದ ಮತ್ತಷ್ಟು ರೈತರಿಗೆ ಹೆಚ್ಚಿನ ಸಾಲ ಸೌಲಭ್ಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಶಾಸಕ ಆರ್. ನರೇಂದ್ರ ತಿಳಿಸಿದರು.
ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ರಾಮಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಹನೂರು ಹಾಗೂ ಕೊಳ್ಳೇಗಾಲ ಭಾಗದ ಪ್ರಾಥಮಿಕ ಕೃಷಿ ಪತ್ತಿನ ಪ್ರತಿನಿಧಿಯಾಗಿ ಸ್ಪರ್ಧಿಸಿದ್ದ ನನಗೆ ನಮ್ಮ ಜೊತೆಯಲ್ಲಿದ್ದ ನಾಲ್ವರು ಸದಸ್ಯರು ದ್ರೋಹ ಮಾಡಿ ನಮ್ಮ ಪ್ರತಿಸ್ಪರ್ಧಿಗೆ ಮತದಾನ ಮಾಡಿದ್ದಾರೆ.
ಉಳಿದ ಎಂಟು ಜನ ಸದಸ್ಯರು ಯಾವುದೇ ಹಣ ಆಮಿಷಗಳಿಗೆ ಒಳಗಾಗದೆ ನನ್ನ ಮೇಲೆ ವಿಶ್ವಾಸವಿಟ್ಟು ಮತ ನೀಡಿದ್ದಾರೆ. ಅವರನ್ನು ನಾನು ಇರುವ ತನಕ ಎಂದಿಗೂ ಮರೆಯುವುದಿಲ್ಲ ಅವರಿಗೆ ನಾನು ಆಭಾರಿಯಾಗಿದ್ದೇನೆ ಎಂದರು.
ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿತ್ತು. 65 ಲಕ್ಷ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣ ಗ್ರಾಹಕರು ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿ ಮಾಡಿ ಕೊಡಲಾಗಿದೆ. ಅಪೆಕ್ಸ್ ಬ್ಯಾಂಕಿನಿಂದ ಹನೂರು ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 35 ಲಕ್ಷ ಕೊಡಿಸಿದ್ದೇನೆ. ಸಂಘವು 2.5 ಕೋಟಿ ಲಾಭದಲ್ಲಿದ್ದು 1.70 ಕೋಟಿ ವೆಚ್ಚದಲ್ಲಿ ನೂತನ ಕೊಠಡಿ ನಿರ್ಮಾಣ ಮಾಡುತ್ತಿದ್ದು ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ ಮಾತನಾಡಿ ಮಾಜಿ ಶಾಸಕ ಆರ್. ನರೇಂದ್ರ ಅವರು ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ನಮ್ಮ ಭಾಗದ ರೈತರಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಿ ಕೊಟ್ಟಿದ್ದಾರೆ. ಅವರನ್ನು ಅವಿರೋಧ ಆಯ್ಕೆ ಮಾಡಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ನ್ಯಾಯಾಲಯದ ಮೂಲಕ ನ್ಯಾಯ ಸಿಕ್ಕಿದೆ. ವೈಯಕ್ತಿಕವಾಗಿ ಇದು ನನಗೆ ತೃಪ್ತಿ ತಂದಿಲ್ಲ ಎಂದರು.
ರಾಜ್ಯ ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಮದುವನಹಳ್ಳಿ ಶಿವಕುಮಾರ್ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಪಕ್ಷದ ಕಾರ್ಯಕರ್ತರು ಮುಖಂಡರು ನೂತನ ನಿರ್ದೇಶಕರನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಹನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಕುಂದ ವರ್ಮ, ರಾಮಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಕುಂದ ವರ್ಮ ಈ ಸಂದರ್ಭದಲ್ಲಿ ಹನೂರು ಅಲ್ಪ ಸಂಖ್ಯಾತರ ಅಧ್ಯಕ್ಷ ಸೈಯದ್ ಸಮೀವುಲ್ಲಾ , ಉಪಾಧ್ಯಕ್ಷ ಫಕ್ರುದ್ದೀನ್ ಶಬ್ಬೀರ್ ಅಹಮದ್ ಕಾರ್ಯದರ್ಶಿ, ನಯೀಮ್ ಶರೀಫ್ ಕಾರ್ಯದರ್ಶಿ ಶಾಫಿಯುಲ್ಲಾ ಕೌದಳ್ಳಿ, ಅಲ್ಪಸಂಖ್ಯಾತ ಕಾರ್ಯದರ್ಶಿ ಮುನವರ್ , ಜವಾದ್ಅಹಮದ್, ತಾರಿಖ್ ,ಜುಲಿಫಿಕರ್ ಅಹಮದ್ ,ಅಲ್ತಾಫ್ ಖಾನ್ ನಯೀಮ್, ಖಲಂದರ್, ನವಾಬ್ ಹಾಗೂ ಇನ್ನಿತರರು ಇದ್ದರು.
ವರದಿ :ಉಸ್ಮಾನ್ ಖಾನ್




















