ಬೆಂಗಳೂರು : ಚಲನಚಿತ್ರೋತ್ಸವದ ಸಿದ್ಧತೆಗಳು ಬಿರುಸಿನಿಂದ ಸಾಗುತ್ತಿದ್ದು, ಜನವರಿ 29ರಿಂದ ಫೆಬ್ರವರಿ 06ರವರೆಗೆ ಈ ಚಿತ್ರೋತ್ಸವ ನಡೆಯಲಿದೆ ಎಂದು ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸಮಾಜದಲ್ಲಿ ”ಮಹಿಳಾ ಸಬಲೀಕರಣ”ದ ಮಹತ್ವವನ್ನು ಸಾರುವ ಸಲುವಾಗಿ ಈ ಬಾರಿಯ ಚಿತ್ರೋತ್ಸವಕ್ಕೆ ಅದೇ ವಿಷಯವನ್ನು ಪ್ರಮುಖ ಥೀಮ್ ನಿಗದಿಪಡಿಸಲಾಗಿದೆ ಎಂದರು.
ಪ್ರಕಾಶ್ ರಾಜ್ ರಾಯಭಾರಿ:
ಈ ಬಾರಿಯ ಚಲನಚಿತ್ರೋತ್ಸವದ ವಿಶೇಷ.
ಆಕರ್ಷಣೆಯಾಗಿ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಪ್ರಕಾಶ್ ರಾಜ್ ಅವರನ್ನು ರಾಯಭಾರಿಯನ್ನಾಗಿ (Brand Ambassador) ನೇಮಿಸಲಾಗಿದೆ. ವಿಧಾನಸೌಧದ ಮುಂಭಾಗದ ಭವ್ಯ ಮೆಟ್ಟಿಲುಗಳ ಮೇಲೆ ಚಿತ್ರೋತ್ಸವಕ್ಕೆ ಅದ್ಧೂರಿ ಚಾಲನೆ ಸಿಗಲಿದೆ.
ಜಾಗತಿಕ ಸಿನಿಮಾಗಳ ಹಬ್ಬ:
ಒಟ್ಟು 60ಕ್ಕೂ ಹೆಚ್ಚು ದೇಶಗಳ ಸುಮಾರು 200.
ಶ್ರೇಷ್ಠ ಚಲನಚಿತ್ರಗಳು ಇಲ್ಲಿ ಪ್ರದರ್ಶನಗೊಳ್ಳಲಿದ್ದು, 400ಕ್ಕೂ ಹೆಚ್ಚು ಪ್ರದರ್ಶನಗಳನ್ನು ಆಯೋಜಿಸಲಾಗಿದೆ. ಕಾನ್ಸ್, ಬರ್ಲಿನ್, ವೆನಿಸ್ ಮತ್ತು ಟೊರಂಟೋದಂತಹ ಜಾಗತಿಕ ಚಿತ್ರೋತ್ಸವಗಳಲ್ಲಿ ಪ್ರಶಸ್ತಿ ಪಡೆದ ಚಿತ್ರಗಳ ಜೊತೆಗೆ, ಈ ಬಾರಿಯ ಆಸ್ಕರ್ ರೇಸ್ನಲ್ಲಿರುವ ಚಿತ್ರಗಳೂ ಸಿನಿಮಾ ಪ್ರಿಯರಿಗೆ ವೀಕ್ಷಣೆಗೆ ಲಭ್ಯವಿರಲಿವೆ.
ರಾಜಾಜಿನಗರದ ಲುಲು ಮಾಲ್ನಲ್ಲಿರುವ ಸಿನಿ ಪೊಲಿಸ್ನ 11 ಸ್ಕಿನ್ಗಳಲ್ಲಿ ಚಿತ್ರೋತ್ಸವದ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಏಷಿಯನ್, ಭಾರತೀಯ ಮತ್ತು ಕನ್ನಡ ಸಿನಿಮಾ ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಇದಕ್ಕೆ ಉತ್ತಮ ಸ್ಪಂದನೆ ದೊರಕಿದೆ.
ಈ ಮೂರು ಸ್ಪರ್ಧಾ ವಿಭಾಗಗಳಿಗೆ ಇದುವರೆಗೆ 110ಕ್ಕೂ ಹೆಚ್ಚು ಚಲನಚಿತ್ರಗಳು ಸಲ್ಲಿಕೆಯಾಗಿವೆ. ಚಲನಚಿತ್ರಗಳ ಸ್ಪರ್ಧಾತ್ಮಕ ವಿಭಾಗಗಳ ಅರ್ಜಿ ಸಲ್ಲಿಕೆಗೆ ಡಿ.31 ಕಡೆ ದಿನವಾಗಿದೆ.
ಹಾಗೆಯೇ ಪೋಲಿಷ್ ಕಲ್ಬರಲ್ ಸೆಂಟರ್ ಸಹಯೋಗದಲ್ಲಿ ಪೊಲೆಂಡ್ನ ಖ್ಯಾತ ನಿರ್ದೇಶಕರಾದ ಅಂದ್ರೆ ವಾಜ್ಞಾ ಅವರ ಶತಮಾನೋತ್ಸವ.
ಸ್ಮರಣಾರ್ಥವಾಗಿ ಅವರ ಆಯ್ದ ಚಲನಚಿತ್ರಗಳ ವಿಶೇಷ ಪುನರಾವಲೋಕನ (Retrospective), ಈ ಬಾರಿ ಚಿತ್ರೋತ್ಸವದಲ್ಲಿ ಆಯೋಜಿಸಲಾಗಿದೆ. ಇದರೊಂದಿಗೆ ಅಲಿಯಾನ್ಸ್ ಫ್ರಾಂಸೇ ಬೆಂಗಳೂರು ಹಾಗೂ ಫ್ರೆಂಚ್ ಇನ್ಸಿಟ್ಯೂಟ್ ಇನ್ ಇಂಡಿಯಾ ಸಹಯೋಗದಲ್ಲಿ ಆಫ್ರಿಕಾ ಸಿನಿಮಾಗಳ ಇತಿಹಾಸವನ್ನು ದಾಖಲಿಸುವ ವಿಶೇಷ ಚಲನಚಿತ್ರಗಳ ಸರಣಿಯನ್ನೂ ಈ ವರ್ಷದ ಚಿತ್ರೋತ್ಸವದಲ್ಲಿ ಪ್ರದರ್ಶಿಸಲಾಗುತ್ತಿದೆ.
2025-26 ನೇರ ಸಾಲಿನ 17ನೇ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ಏರ್ಪಡಿಸಲು ರೂ. 7 ಕೋಟಿ ರೂಪಾಯಿಗಳ ಅಗತ್ಯವಿರುವ ಅನುದಾನ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ವಾರ್ತಾ ಇಲಾಖೆ ಕಾರ್ಯದರ್ಶಿ ಬಿ.ಬಿ. ಕಾವೇರಿ, ಆಯುಕ್ತ ಹೇಮಂತ್ ನಿಂಬಾರ್ಳ್ಯ, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಅಕಾಡೆಮಿ ಸದಸ್ಯರು ಭಾಗವಹಿಸಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















