ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅನಗತ್ಯ ಭಯ ಬೇಡ ಸಹಾಯವಾಣಿಗೆ ಕರೆ ಮಾಡಿ ನ್ಯಾಯಧೀಶ ಮರಿಯಪ್ಪ

ಬಾಲ್ಯ ವಿವಾಹ ತಡೆ, ಮಕ್ಕಳ ಮೇಲಿನ ಶೋಷಣೆ ವಿರುದ್ಧ ರಕ್ಷಣೆಗೆ ಪೋಕ್ಸೋ ಕಾಯ್ದೆಯ ಕುರಿತಾದ ಅರಿವು ನೆರವು ಕಾರ್ಯಕ್ರಮ.

ಯಾದಗಿರಿ/ಗುರುಮಠಕಲ್: ಡಿ.24 ಪೋಕ್ಸೊ ಕಾಯ್ದೆ ಕುರಿತು ಮಾಹಿತಿ ತಿಳಿದುಕೊಂಡು ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ರೀತಿಯ ಅಪರಾಧ ನಡೆಯದಂತೆ ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮರಿಯಪ್ಪ ತಿಳಿಸಿದರು.

ಪಟ್ಟಣದ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಢಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಮಕ್ಕಳ ಹಕ್ಕುಗಳು, ಬಾಲ್ಯ ವಿವಾಹ, ಹದಿಹರಿಯದ ಆಕರ್ಷಣೆ, ಶೋಷಣೆ, ಮಕ್ಕಳ ಕಾನೂನು ಕುರಿತು ಕಾನೂನು ಅರಿವು – ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರ ಮೇಲೆ ಈ ಮೊದಲು ಶೋಷಣೆ ಆದಾಗ ಕಾನೂನಿನಲ್ಲಿ ಶಿಕ್ಷೆ ನೀಡುವ ಅಧಿಕಾರವಿದೆ ಆದರೆ ಅಪ್ರಾಪ್ತರ ಮೇಲಿನ ಶೋಷಣೆಗೆ ವಿಶೇಷ ಕಾನೂನು ಇರಲಿಲ್ಲ. ಪೋಕ್ಸೊ ಕಾಯ್ದೆ ಅಪ್ರಾಪ್ತರ ಮೇಲಿನ ಶೋಷಣೆ ತಡೆಗಟ್ಟುವಲ್ಲಿ ಈ ಕಾನೂನು ಸಹಾಯವಾಗಿದೆ ಎಂದರು.
ಲೈಂಗಿಕವಾಗಿ ಶೋಷಣೆಗೆ ಒಳಗಾದ ಸಂತ್ರಸ್ತರು ಕಂಡು ಬಂದಲ್ಲಿ ತಕ್ಷಣ ಮಕ್ಕಳ ಸಹಾಯವಾಣಿ 1098 ಸಂಖ್ಯೆಯನ್ನು ಸಂಪರ್ಕಿಸಿ ಅವರನ್ನು ರಕ್ಷಿಸಬೇಕು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ವಕೀಲೆ ಕೃಷ್ಣವೇಣಿ ಮಾಹಿತಿ ನೀಡಿದರು.

ಅದೇ ರೀತಿ 18 ವರ್ಷದ ಒಳಗಿನ ಹೆಣ್ಣು ಅಥವಾ ಗಂಡು ಮಕ್ಕಳು ವಿವಾಹವಾಗುವುದು ಮದುವೆ ಮಾಡಿಸುವುದು, ಬೆಂಬಲ ನೀಡುವುದು ಸಹ ಬಾಲ್ಯವಿವಾಹ ಎಂದು ಪರಿಗಣಿಸಿ ಪೋಕ್ಸೊ ಕಾಯ್ದೆ ವ್ಯಾಪ್ತಿಗೆ ಪರಿಗಣಿಸಿ ಇಂತಹ ಅಪರಾಧಗಳಿಗೆ 20 ವರ್ಷಗಳ ಕಾಲ ಕಾರಾಗೃಹ ವಾಸ, ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಪೋಕ್ಸೊ ಕಾಯ್ದೆ ಕುರಿತಾದ ಜಾಗೃತಿ ಅವಶ್ಯ ಎಂದು ವಕೀಲರಾದ ಬಿ. ಜಿ. ಪಾಟೀಲ್ ತಿಳಿಸಿದರು.

ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಮಲ್ಲಿಕಾರ್ಜುನ ಹೊಸಮನಿ, ಪುರಸಭೆ ಮುಖ್ಯಾಧಿಕಾರಿ ಶರಣಪ್ಪ ಮಡಿವಾಳ, ಕಾಲೇಜಿನ ವಿದ್ಯಾರ್ಥಿನಿಯರು ಇದ್ದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!