ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಹಾನುಭಾವ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರು ಮಾಡಿದ ಕಾರ್ಯಗಳು ಶ್ಲಾಘನೀಯ : ಪದ್ಮಾವತಿ.

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಬಿಜೆಪಿ ಘಟಕದ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಆಚರಿಸಲಾಯಿತು. ನಂತರ ಬಿಜೆಪಿ ಮಹಿಳಾ ಘಟಕದ ಕಾರ್ಯದರ್ಶಿ ಪದ್ಮಾವತಿಯವರು ಮಾತನಾಡಿ ಜನನಾಯಕ, ಪದ್ಮವಿಭೂಷಣ, ಭಾರತ ರತ್ನ, ಶ್ರೇಷ್ಟ ಸಂಸದೀಯ ಪಟು, ಪ್ರಧಾನಮಂತ್ರಿ, ಕವಿ, ವಾಗ್ಮಿ, ಸಹ್ರದಯಿ, ಮಾನವತಾವಾದಿ, ನಿಷ್ಟಾವಂತ ಕಾರ್ಯಕರ್ತ, ಸರಳಜೀವಿ, ಉದಾರ ವ್ಯಕ್ತಿತ್ವ ಮತ್ತು ನಡವಳಿಕೆಗಳಿಂದ ಅತ್ಯಂತ ಜನಪ್ರಿಯರಾಗಿದ್ದರು.

1999-2004 ರ ಅವಧಿಯಲ್ಲಿ ವಾಜಪೇಯಿ ಸರಕಾರವು ಸರ್ವತೋಮುಖ ಅಭಿವೃದ್ದಿಗೆ ಬಲವಾದ ಅಡಿಪಾಯ ಹಾಕಿತು. ಅಂತ್ಯೋದಯ ಅನ್ನಯೋಜನೆ, ಪ್ರಧಾನಮಂತ್ರಿ ಗ್ರಾಮಸಡಕ್ ಯೋಜನೆ, ಸುವರ್ಣ ಚತುಷ್ಕೋನ ರಸ್ತೆ ಯೋಜನೆ ಮತ್ತು ನ್ಯೂಟೇಲಿಕಾಂ ಯೋಜನೆಗಳನ್ನು ಜಾರಿಗೆ ತಂದರು.

ಮಹಿಳಾ ಸಬಲೀಕರಣ ಮತ್ತು ಸಾಮಾಜಿಕ ಸಮಾನತೆಯ ಹರಿಕಾರರಾದ ವಾಜಪೇಯಿ ಅವರ ದೂರದೃಷ್ಟಿಯ ಭಾರತವನ್ನು ಪ್ರಗತಿ ಪಥದತ್ತ ಕೊಂಡ್ಯೊಯುವ ಗುರಿಯನ್ನು ಹೊಂದಿದ್ದರು. ಭಾರತವನ್ನು ವಿಶ್ವದ ಅತ್ಯಂತ ಬಲಿಷ್ಟ ಮತ್ತು ಸಮ್ರದ್ದಿ ದೇಶವನ್ನಾಗಿಸಲು ಕಂಕಣ ಬದ್ದರಾಗಿದ್ದರು ಎಂದರು.
ಈ ಸಂದರ್ಭದಲ್ಲಿ ಮಹಾಶಕ್ತಿ ಕೆಂದ್ರದ ಅಧ್ಯಕ್ಷರಾದ ಟಿ.ರಾಮು, ಪಂಪಾಪತಿ.ಹೆಚ್., ಬಡಿಗೇರ ವೀರೇಶ, ಮಲ್ಲೇಶ ಹೆಚ್., ಬಾಲೆಸಾಬ್, ಚನ್ನಳ್ಳಿ ಮಹೇಶ, ಪರುಷುರಾಮ, ಸೂಗೂರು ಜಡೇಶ, ಗಾದಿಲಿಂಗ, ಎಸ್.ರಾಮಪ್ಪ ಸೇರಿದಂತೆ ಇತರರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!