ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಶಸ್ತಿಯೇ ನನ್ನನ್ನು ಹುಡುಕಿಕೊಂಡು ಬಂದಿರುವುದು ಸಂತಸ ತಂದಿದೆ : ಪ್ರಶಸ್ತಿ ಪುರಸ್ಕೃತ ಗಾದಿ ನಿಂಗಪ್ಪ

ಕಂಪ್ಲಿ: ಬಳ್ಳಾರಿ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಇತ್ತೀಚೆಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿಕ್ಷಕ ಗಾದಿ ನಿಂಗಪ್ಪ (ನಿಂಗರಾಜ ಎಸ್.ಕೆ) ಇವರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದರು.
ಇಲ್ಲಿನ ಗಾದಿ ನಿಂಗಪ್ಪ ವನಿತಾ ದಂಪತಿಗೆ ಪ್ರಶಸ್ತಿ ನೀಡುವ ಮೂಲಕ ಸತ್ಕರಿಸಿ ಸನ್ಮಾನಿಸಲಾಯಿತು. ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ಶಿವಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಗಾದಿ ನಿಂಗಪ್ಪ ಪ್ರಶಸ್ತಿ ಸ್ವೀಕರಿಸಿದ ನಂತರ ಮಾತನಾಡಿ, 2016ರಿಂದ ಮೆಟ್ರಿ ಶಿವಪುರ ಸ.ಹಿ.ಪ್ರಾ ಶಾಲೆಯಲ್ಲಿ ಸಹ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದೇನೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಅವರ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಶ್ರಮಿಸಲಾಗುತ್ತಿದೆ. ನಾನು ಯಾವುದೇ ಪ್ರಶಸ್ತಿಯ ಹಿಂದೆ ಹೋದವನಲ್ಲ. ಪ್ರಶಸ್ತಿಯೇ ನನ್ನನ್ನು ಹುಡುಕಿಕೊಂಡು ಬಂದಿರುವುದು ಸಂತಸ ತಂದಿದೆ. ಈ ಪ್ರಶಸ್ತಿಯಿಂದ ಸೇವೆಗೆ ಮತ್ತಷ್ಟು ಪ್ರೋತ್ಸಾಹ ಸಿಕ್ಕಂತಾಗಿದೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹನುಮಂತಪ್ಪ ಮಾತನಾಡಿ, ಸಹ ಶಿಕ್ಷಕ ಗಾದಿ ನಿಂಗಪ್ಪ ಅವರ ನಿಸ್ವಾರ್ಥ ಸೇವೆ ಗುರುತಿಸಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿರುವುದು ನಮಗೆಲ್ಲಾ ಹರ್ಷ ತಂದಿದೆ. ಇವರ ಕರ್ತವ್ಯ ನಿಷ್ಠ ಸೇವೆ, ಸಾಮಾಜಿಕ ಕಳಕಳಿ, ಮಕ್ಕಳ ಬಗ್ಗೆ ವಿಶೇಷ ಕಾಳಜಿ, ಹೀಗೆ ಅವರ ಸೇವೆಗೆ ಸಂದ ಗೌರವ ಇದಾಗಿದೆ ಎಂದು ಹೇಳಿದರು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೊಡ್ಡಬಸಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಸುನಿತಾ, ಜಿಪಿಟಿಸಿ ಸಂಘದ ಅಧ್ಯಕ್ಷ ಮಂಜುನಾಥ, ಸಿಆರ್ಪಿ ಕರುಣಾಕರ, ಮುಖ್ಯಗುರು ವಿಶ್ವನಾಥ, ಸಹೋದರಾದ ಬಸವರಾಜ ನೆಲಜೇರಿ, ಸಿದ್ದಪ್ಪ ಗಂಗಾವತಿ, ಸಹ ಶಿಕ್ಷಕರಾದ ಪಂಪನಗೌಡ, ಇಮಾಮ್ ಸಾಬ್, ಗಂಗಮ್ಮ, ಸುನಿತಾ, ರಾಜೇಶ್ವರಿ, ರಾಜನಾಯಕ, ಬಸವರಾಜ, ಶಿವಕುಮಾರ, ಆಂಜನೇಯ್ಯ, ರಾಮಚಂದ್ರಪ್ಪ, ಮಡಿವಾಳಪ್ಪ ಸೇರಿದಂತೆ ಇತರರು ಅಭಿನಂದಿಸುವ ಜೊತೆಗೆ ಹರ್ಷ ವ್ಯಕ್ತಪಡಿಸಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!