ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾರಟಗಿ: ಕಾರ್ಮಿಕನ ಮಗಳಿಗೆ ಚಿನ್ನದ ಕಿರೀಟದ ಗರಿ

ಕಾರಟಗಿ: ಬಡತನದ ಸವಾಲುಗಳ ಮಧ್ಯೆಯೇ ಓದುವ ಛಲ ಹೊಂದಿದ್ದ ಕಾರ್ಮಿಕರೊಬ್ಬರ ಮಗಳು ಮಹಿಳಾ ವಿಶ್ವವಿದ್ಯಾನಿಲಯಕ್ಕೆ ಪ್ರಥಮ ಸ್ಥಾನ ಗಳಿಸುವ ಮೂಲಕ ಚಿನ್ನದ ಪದಕದೊಂದಿಗೆ ನಗೆ ಬೀರಿದ್ದಾರೆ.

ಪಟ್ಟಣದ ಕಸ್ತೂರ ಬಾ ಮಹಿಳಾ ಪದವಿ ಮಹಾವಿದ್ಯಾಲಯದ ಬಿ.ಕಾಂ. ವಿದ್ಯಾರ್ಥಿನಿ ಕೆ.ರೇಖಾ ಪರಶುರಾಮ ಅವರು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಿಂದ ನಡೆದ ಪರೀಕ್ಷೆಯಲ್ಲಿ ಶೇ 95.6ರಷ್ಟು ಅಂಕ ಗಳಿಸಿ, ವಿಶ್ವವಿದ್ಯಾನಿಲಯಕ್ಕೆ ಪ್ರಥಮ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿನಿಯ ತಂದೆ ಪರಶುರಾಮ ಕೂಲಿ ಕಾರ್ಮಿಕ ಬಡ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮೂವರು ಹೆಣ್ಣು ಮಕ್ಕಳನ್ನು ಓದಿಸುತ್ತಾ ದೈನಂದಿನ ಬದುಕು ಕಟ್ಟಿಕೊಂಡಿದ್ದಾರೆ. ವಿದ್ಯಾರ್ಥಿನಿ ರೇಖಾ ಸವಾಲುಗಳನ್ನು ಮೆಟ್ಟಿನಿಂತು ನಿರಂತರ ಅಧ್ಯಯನ, ಕ್ರಿಯಾಶೀಲ ಚಟುವಟಿಕೆಗಳಿಂದಾಗಿ ಗುರಿ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ.

ವಿದ್ಯಾರ್ಥಿನಿ ರೇಖಾಗೆ ಕಾಲೇಜಿನ ಶುಲ್ಕ ಭರಿಸುವುದೇ ಸವಾಲಾಗಿ, ವಿದ್ಯಾಭ್ಯಾಸವನ್ನೇ ನಿಲ್ಲಿಸುವ ಸ್ಥಿತಿ ಎದುರಾಗಿತ್ತು. ಇದೆಲ್ಲವನ್ನೂ ಮೆಟ್ಟಿನಿಂತು ಚಿನ್ನದ ಪದಕದ ಕಿರೀಟವನ್ನು ಇದೀಗ ಹೊತ್ತಿದ್ದಾರೆ.
ವಿದ್ಯಾರ್ಥಿನಿ ರೇಖಾ ಪ್ರತಿಕ್ರಿಯಿಸಿ,‘ನಿರಂತರ ಅಧ್ಯಯನ, ಉಪನ್ಯಾಸಕರ ಮಾರ್ಗದರ್ಶನದಿಂದ ಗುರಿ ಸಾಧಿಸಲು ಸಾಧ್ಯವಾಗಿದೆ. ಅವರೆಲ್ಲರಿಗೂ ಸದಾ ಋಣಿಯಾಗಿರುತ್ತೇನೆ’ ಎಂದರು.
ಕಾಲೇಜಿನ ಆಡಳಿತ ಮಂಡಳಿ ಮುಖ್ಯಸ್ಥರು, ಉಪನ್ಯಾಸಕರು ವಿದ್ಯಾರ್ಥಿನಿ ರೇಖಾ ಅವರ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!