ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನ ಸ್ವಂತ ಖರ್ಚಿನಲ್ಲಿ ವಿದ್ಯಾರ್ಥಿಗಳ ವಿಮಾನಯಾನ

ಕೊಪ್ಪಳ ತಾಲ್ಲೂಕಿನ ಬಹದ್ದೂರಬಂಡಿ ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಅವರು ಸ್ವಂತ ಹಣದಿಂದ ತಮ್ಮ ಶಾಲೆಯ 24 ವಿದ್ಯಾರ್ಥಿಗಳನ್ನು ವಿಮಾನದಲ್ಲಿ ಶೈಕ್ಷಣಿಕ ಪ್ರವಾಸಕ್ಕೆ ಶುಕ್ರವಾರ ಬೆಂಗಳೂರಿಗೆ ಕರೆದುಕೊಂಡು ಹೋದರು.

ಬಳ್ಳಾರಿಯ ಜಿಂದಾಲ್‌ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಿದ ಮಕ್ಕಳು ವಿಮಾನದಲ್ಲಿ ಫೋಟೊ ಕ್ಲಿಕ್ಕಿಸಿಕೊಂಡು ಶಿಕ್ಷಕರು ಹಾಗೂ ಸಿಬ್ಬಂದಿ ಜೊತೆ ಸಂಭ್ರಮಿಸಿದರು. ಮೊದಲ ಬಾರಿಗೆ ವಿಮಾನಯಾನ ಪ್ರಯಾಣ ಮಾಡಿದ ಮಕ್ಕಳಲ್ಲಿ ಸಂಭ್ರಮ ಮನೆ ಮಾಡಿತ್ತು. ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರೂ ಆದ ಬೀರಪ್ಪ ಅಂಡಗಿ ಹಣ ಸಂಗ್ರಹ ಮಾಡದೆ ವಿದ್ಯಾರ್ಥಿಗಳ ವಿಮಾನ ಪ್ರಯಾಣ, ಊಟ ಹಾಗೂ ವಸತಿ ಸೌಲಭ್ಯದ ಖರ್ಚು ಭರಿಸಿದ್ದಾರೆ.

ವಿಮಾನದಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗುವ ವಿದ್ಯಾರ್ಥಿಗಳ ಆಯ್ಕೆಗಾಗಿ ಪ್ರವೇಶ ಪರೀಕ್ಷೆ ನಡೆಸಿ 5ರಿಂದ 8ನೇ ತರಗತಿ ತನಕ ಪ್ರತಿ ತರಗತಿಯಿಂದ ತಲಾ ಆರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ. ಬಹದ್ದೂರ್‌ ಬಂಡಿ ಶಾಲೆಯಿಂದ ಜಿಲ್ಲಾಡಳಿತ ಭವನಕ್ಕೆ ಬಂದ ಮಕ್ಕಳು ಮತ್ತು ಪ್ರವಾಸ ವ್ಯವಸ್ಥೆ ಮಾಡಿದ ಬೀರಪ್ಪ ಅವರಿಗೆ ಸಂಸದ ರಾಜಶೇಖರ ಹಿಟ್ನಾಳ ಶುಭ ಕೋರಿದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬೀರಪ್ಪ ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣದ ಅನುಭವ ಕಿರಿಯ ವಯಸ್ಸಿನಲ್ಲಿಯೇ ಲಭಿಸಬೇಕೆಂದು ಈ ವ್ಯವಸ್ಥೆ ಮಾಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ವಿಮಾನ ಪ್ರವಾಸಕ್ಕೆ ಮಕ್ಕಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!