ಬಳ್ಳಾರಿ: ಹೊಸ ವರ್ಷದ ಆಚರಣೆಯ ವೇಳೆ ಸಂಭವಿಸಬಹುದಾದ ರಸ್ತೆ ಅಪಘಾತಗಳಿಂದ ಉಂಟಾಗುವ ಜೀವ ಹಾನಿಯನ್ನು ತಡೆಗಟ್ಟುವ ಸಲುವಾಗಿ 108 ಆರೋಗ್ಯ ಕವಚ ಆಂಬುಲೆನ್ಸ್ ಬಳ್ಳಾರಿ ಜಿಲ್ಲೆಯಲ್ಲಿ ಸಿದ್ದವಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕ ಎಸ್.ನವೀನ್ಕುಮಾರ ತಿಳಿಸಿದ್ದಾರೆ.
ಅವರು ಬುಧವಾರ ಬಳ್ಳಾರಿ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ 108 ಆಂಬುಲೆನ್ಸ್ ಸೇವೆ ಸನ್ನದ್ಧವಾಗಿದ್ದು ಸಾಮಾನ್ಯ ದಿನಗಳಿಗಿಂತ ಹೊಸ ವರ್ಷದ ಆಚರಣೆ ವೇಳೆಯ ಹೆಚ್ಚು ಅಪಘಾತ ಪ್ರಕರಣಗಳು ದಾಖಲಾಗುವುದರಿಂದ ಈ ಸಂದರ್ಭದಲ್ಲಿ ವಿಶೇಷ ಕ್ರಮ ವಹಿಸಲಾಗಿದೆ. 108 ಆಂಬುಲೆನ್ಸ್ ಸೇವೆಯು ಪೊಲೀಸ್ ಇಲಾಖೆಯೊಂದಿಗೆ ನಿಕಟ ಸಂಪರ್ಕವನ್ನು ಹೊಂದಿದ್ದು ಹೆಚ್ಚಿನ ತುರ್ತು ಪರಿಸ್ಥಿತಿಯನ್ನು ನಿರೀಕ್ಷಿಸುವ ಪ್ರದೇಶಗಳಲ್ಲಿ ಹೆಚ್ಚುವರಿ ಆಂಬುಲೆನ್ಸ್ ಸೇವೆ ನಿಯೋಜಿಸಲಾಗಿದೆ. ಹೆಚ್ಚುವರಿ ಸೇವೆಗಾಗಿಯೇ ಸಿಬ್ಬಂದಿಯ ಸಾಪ್ತಾಹಿಕ ರಜೆಯನ್ನು ರದ್ದುಗೊಳಿಸಲಾಗಿದೆ. ಎದೆಗೆ ಮುಂಜಾಗ್ರತೆ ಕ್ರಮವಾಗಿ ಎಲ್ಲ ಆಂಬುಲೆನ್ಸ್ಗಳಲ್ಲಿ ಇಂಧನ, ಆಮ್ಲಜನಕ, ವೈದ್ಯಕೀಯ ಉಪಕರಣಗಳನ್ನು ಸಿದ್ಧಪಡಿಸಿಕೊಳ್ಳಲಾಗಿದ್ದು, ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ಎಲ್ಲಾ 10 ಆಂಬುಲೆನ್ಸ್ಗಳಿಗೂ ತಜ್ಞ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು ಯಾವುದೇ ತೂತು ಪರಿಸ್ಥಿತಿ ಎದುರಾದಲ್ಲಿ 108 ನಂಬರ್ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವರದಿ : ಜಿಲಾನಸಾಬ್ ಬಡಿಗೇರ್



















