ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ವತಂತ್ರ ಹೋರಾಟಗಾರ ಆದಿವಾಸಿ ಮುಖಂಡ ಬಿರ್ಸಾ ಮುಂಡ ರವರ 150ನೇ ಜಯಂತಿ ಮಹೋತ್ಸವ ಆಚರಣೆ.

ಹನೂರು ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಆಯೋಜಿಸಲಾಗಿದ್ದ 150ನೇ ಜಯಂತಿ ಮಹೋತ್ಸವವನ್ನು ಗಿಡಕ್ಕೆ ನೀರು ಹಾಕುವುದರ ಮೂಲಕ ಹಾಗೂ ಬಿರ್ಸಾ ಮುಂಡ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಯಿತು.
ನಂತರ ಮಾತನಾಡಿದ ಅವರು
ಬಿರ್ಸಾ ಮುಂಡರವರ 150ನೇ ಜನ್ಮದಿನದ ಅಂಗವಾಗಿ (ಜನಜಾತೀಯ ಗೌರವ್ ದಿವಸ್) ಇಂದು ನಾವು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅಪ್ರತಿಮ ನಾಯಕ, ಬುಡಕಟ್ಟು ಸಮುದಾಯದ ಆರಾಧ್ಯ ದೈವ ‘ಭಗವಾನ್’ ಬಿರ್ಸಾ ಮುಂಡರವರ 150ನೇ ಜನ್ಮದಿನವನ್ನು ಆಚರಿಸುತ್ತಿದ್ದೇವೆ. ಈ ಐತಿಹಾಸಿಕ ಸಂದರ್ಭದಲ್ಲಿ ಆ ಮಹಾನ್ ಚೇತನಕ್ಕೆ ನನ್ನ ಭಕ್ತಿಪೂರ್ವಕ ಪ್ರಣಾಮಗಳನ್ನು ಅರ್ಪಿಸುತ್ತೇನೆ ಎಂದರು.

ಬಿರ್ಸಾ ಮುಂಡರವರ ಜೀವನದ ಪ್ರಮುಖ ಅಂಶಗಳು:
ಕ್ರಾಂತಿಯ ಕಿಡಿ: ಕೇವಲ 25 ವರ್ಷಗಳ ಅಲ್ಪ ಅವಧಿಯಲ್ಲಿ ಬಿರ್ಸಾ ಮುಂಡರು ಬ್ರಿಟಿಷ್ ಸಾಮ್ರಾಜ್ಯಶಾಹಿ ಮತ್ತು ಜಮೀನ್ದಾರಿ ಪದ್ಧತಿಯ ವಿರುದ್ಧ ‘ಉಲ್ಗುಲಾನ್’ (ಮಹಾ ದಂಗೆ) ಘೋಷಿಸಿ ಜನರಲ್ಲಿ ಸ್ವಾಭಿಮಾನದ ಕಿಚ್ಚು ಹಚ್ಚಿದರು.

ಧರಿತಿ ಆಬಾ: ಅವರನ್ನು ಪ್ರೀತಿಯಿಂದ ‘ಧರಿತಿ ಆಬಾ’ (ಭೂಮಿಯ ತಂದೆ) ಎಂದು ಕರೆಯಲಾಗುತ್ತದೆ. ಅವರು ಕೇವಲ ಒಬ್ಬ ಹೋರಾಟಗಾರರಲ್ಲ, ಬುಡಕಟ್ಟು ಜನರ ಸಂಸ್ಕೃತಿ ಮತ್ತು ಹಕ್ಕುಗಳ ರಕ್ಷಕರೂ ಆಗಿದ್ದರು.

ಜಲ-ಜಂಗಲ್-ಜಮೀನು: ಅರಣ್ಯ ಮತ್ತು ಭೂಮಿಯ ಮೇಲಿನ ಹಕ್ಕುಗಳಿಗಾಗಿ ಅವರು ನಡೆಸಿದ ಹೋರಾಟ ಇಂದಿಗೂ ನಮಗೆ ಪ್ರೇರಣೆಯಾಗಿದೆ. ಪ್ರಕೃತಿಯನ್ನು ಪ್ರೀತಿಸುವುದು ಮತ್ತು ಸಂರಕ್ಷಿಸುವುದು ಅವರ ಪ್ರಮುಖ ಸಂದೇಶವಾಗಿತ್ತು.

ನಮ್ಮ ಸರ್ಕಾರದ ಬದ್ಧತೆ:
ನಮ್ಮ ಸರ್ಕಾರವು ಬಿರ್ಸಾ ಮುಂಡರವರ ಗೌರವಾರ್ಥವಾಗಿ ಅವರ ಜನ್ಮದಿನವನ್ನು ‘ಜನಜಾತೀಯ ಗೌರವ್ ದಿವಸ್’ ಎಂದು ಆಚರಿಸುತ್ತಿದೆ. ನಮ್ಮ ಕ್ಷೇತ್ರದಲ್ಲಿಯೂ ಬುಡಕಟ್ಟು ಸಮುದಾಯದವರ ಅಭಿವೃದ್ಧಿಗಾಗಿ ಶಿಕ್ಷಣ, ಆರೋಗ್ಯ ಮತ್ತು ಮೂಲಭೂತ ಸೌಕರ್ಯಗಳಿಗೆ ನಾವು ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ. ಅವರ ಆಶಯದಂತೆ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ಸಿಗುವಂತೆ ಮಾಡುವುದು ನಮ್ಮ ಗುರಿಯಾಗಿದೆ.
ಮುಂದಿನ ದಿನಗಳಲ್ಲಿ ಆದಿವಾಸಿ ಜನಾಂಗದ ಸರ್ವತಪ್ಮುಖ ಅಭಿವೃದ್ಧಿಗಾಗಿ ಪ್ರಮಾಣಿಕ ಪ್ರಯತ್ನ ಪ್ರಾಮಾಣಿಕ ಪ್ರಯತ್ನದಿಂದ ಶ್ರಮಿಸುತ್ತೇನೆ ಎಂದರು.

ಇದೆ ಸಂದರ್ಭದಲ್ಲಿ ಮಾಜಿ ಶಾಸಕರಾದ ಆರ್. ನರೇಂದ್ರ, ಜಿಲ್ಲಾ ಡಾಕ್ಟರ್ ಮಾದೇಗೌಡರು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳಾದ ಬಿಂದ್ಯ,ತಾಲೂಕು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ರಾಜೇಶ್, ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ರಂಗೇಗೌಡ, ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದ ಕಾರ್ಯದರ್ಶಿಗಳಾದ ಮಾದೇಗೌಡ, ತಾಲೂಕು ಸೋಲಿಗ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ದೊಡ್ಡಸಿದ್ದಯ್ಯ, ಉಪಾಧ್ಯಕ್ಷರಾದ ಮಾದಮ್ಮ, ಕಾರ್ಯದರ್ಶಿ ರಂಗೇಗೌಡ, ಜಂಟಿ ಕಾರ್ಯದರ್ಶಿ ಅರುಣ್ ಕುಮಾರ್, ಖಜಾಂಚಿ ಶಿವಣ್ಣ, ಸಾಯೋಜಕರಾದ ಮಹದೇವಸ್ವಾಮಿ,ಹಾಗೂ ಇತರರು ಇದ್ದರು.

ವರದಿ :ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!