ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭೀಮ ಕೋರೆಗಾಂವ್ ವಿಜಯೋತ್ಸವ.

ಸ್ವಾಭಿಮಾನ, ಸಮಾನತೆ ಹಾಗೂ ನ್ಯಾಯಕ್ಕಾಗಿ ನಡೆದ ಮಹಾನ್ ಹೋರಾಟ ಕೋರೆಗಾಂವ್ ಯುದ್ಧ – ಲಾಲಪ್ಪ ತಲಾರಿ

ಯಾದಗಿರಿ/ಗುರುಮಠಕಲ್: 1818ರ ಜನವರಿ 1ರಂದು ನಡೆದ ಭೀಮಾ ಕೋರೆಗಾಂವ್ ಯುದ್ಧವು ದಮನಿತ ವರ್ಗಗಳ ಸ್ವಾಭಿಮಾನ, ಸಮಾನತೆ ಹಾಗೂ ನ್ಯಾಯಕ್ಕಾಗಿ ನಡೆದ ಮಹಾನ್ ಹೋರಾಟ ಎಂದು ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಲಾಲಪ್ಪ ತಲಾರಿ ಹೇಳಿದರು.

ದಲಿತ ಸಂಘರ್ಷ ಸಮಿತಿ ವತಿಯಿಂದ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ವೀರಯೋಧರ ಭೀಮ ಕೋರೆಗಾಂವ್ ವಿಜಯೋತ್ಸವ ನಿನ್ನೆ ಡಿಸೆಂಬರ್ 31 ಬುಧವಾರ ಆಚರಿಸಲಾಯಿತು.

ಇತಿಹಾಸಪೂರ್ವಕ ಆಚರಣೆಗಳು ಸಮಾಜದಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಸಮಾನತೆ, ಸ್ವಾಭಿಮಾನ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಇದೇ ಮೊದಲ ಬಾರಿ ಆಚರಿಸಲಾಗಿದ್ದು, ಆಚರಣೆ ಪ್ರತಿವರ್ಷ ಮುಂದುವರೆಸುವದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಗುರುನಾಥ್ ತಲಾರಿ, ಶ್ರೀಕಾಂತ್ ತಲಾರಿ, ಗುರುನಾಥ ಕೆ. ಮತ್ತು ನರೇಶ್ ಎ. ನಾಟೀಕಾರ್ ಹಾಗೂ ಜಗದೀಶ್ ಕಟೇಲಗೆರಿ, ಕೃಷ್ಣ ದಾಸರಿ, ಸಾಯಿ, ಭೀಮಶಪ್ಪ, ಹನುಮಂತ್ ಮುಕ್ಕಿಡಿ, ಭೀಮಶಪ್ಪ, ಚಿಂಟು ಭ್ಯಾಗರಿ, ಭೀಮಶಪ್ಪ ಭ್ಯಾಗರಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!