ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಮೊದಲ ಮಹಿಳಾ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿಜೆ ಅವರನ್ನು ಮಂಡ್ಯ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಕರ್ತವ್ಯನಿಷ್ಠೆ, ಶಿಸ್ತು ಹಾಗೂ ಪರಿಣಾಮಕಾರಿ ಪೊಲೀಸ್ ವ್ಯವಸ್ಥೆಗಾಗಿ ಅವರು ಗುರುತಿಸಿಕೊಂಡಿದ್ದರು.
ಪವನ್ ನೆಜ್ಜೂರ್ ಅವರು ಬಳ್ಳಾರಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳಾಗಿ (SP) ನೇಮಕಗೊಂಡಿದ್ದಾರೆ, ಈ ಹಿಂದೆ ಅವರು ಲೋಕಾಯುಕ್ತದಲ್ಲಿ SP ಆಗಿದ್ದರು ಮತ್ತು ಇವರು ಬಳ್ಳಾರಿಗೆ ವರ್ಗಾವಣೆಯಾಗಿದ್ದಾರೆ.
ಪವನ್ ನೆಜ್ಜೂರ್ ರವರ ಪ್ರಮುಖ ಕಾರ್ಯ: ಲೋಕಾಯುಕ್ತ ಎಸ್. ಪಿ. ಆಗಿದ್ದಾಗ ಭ್ರಷ್ಟಾಚಾರದ ವಿರುದ್ಧ ದಾಳಿಗಳನ್ನು ನಡೆಸಿದ್ದಾರೆ, ಉದಾಹರಣೆಗೆ 16.5 ಲಕ್ಷ ರೂಪಾಯಿ ಲಂಚ ಪ್ರಕರಣದಲ್ಲಿ ಬೆಸ್ಕಾಂ ಅಧಿಕಾರಿಗಳನ್ನು ಬಂಧಿಸಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















