ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಳ್ಳಾರಿ ಗಲಭೆಗೆ ಎಸ್ ಪಿ ತಲೆದಂಡ ; ಅಧಿಕಾರ ಸ್ವೀಕರಿಸಿ 1 ದಿನಕ್ಕೆ ವರಿಷ್ಠಾಧಿಕಾರಿ ಪವನ್ ನೆಜ್ಜೂರು ಸಸ್ಪೆಂಡ್

ಬೆಂಗಳೂರು/ಬಳ್ಳಾರಿ: ಬಳ್ಳಾರಿ ನಗರದಲ್ಲಿ ವಾಲ್ಮೀಕಿ ಮಹರ್ಷಿ ಪ್ರತಿಮೆ ಪ್ರತಿಷ್ಠಾಪನೆ ವೇಳೆ ನಡೆದ ಹಿಂಸಾಚಾರ ಹಾಗೂ ಕಲ್ಲು ತೂರಾಟದ ಘಟನೆಗೆ ಸಂಬಂಧಿಸಿದಂತೆ, ಕರ್ತವ್ಯ ಲೋಪದ ಆರೋಪದ ಮೇಲೆ ಬಳ್ಳಾರಿ ಜಿಲ್ಲಾ ಎಸ್ ಪಿ ಯಾಗಿದ್ದ ಪವನ್ ನೆಜ್ಜೂರು (IPS-2016) ಅವರನ್ನು ಅಮಾನತುಗೊಳಿಸಲಾಗಿದೆ. ಸರ್ಕಾರದ ಈ ದಿಢೀರ್ ಕ್ರಮವು ರಾಜ್ಯ ಪೊಲೀಸ್ ವಲಯದಲ್ಲಿ ಸಂಚಲನ ಮೂಡಿಸಿದೆ.

ಘಟನೆಯ ವಿವರ:
ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಎಸ್‌ಪಿ ವೃತ್ತದ ಬಳಿ (ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರ ಮನೆ ಮುಂದೆ) ಗುಂಪು ಘರ್ಷಣೆ ನಡೆದಿತ್ತು. ಬ್ಯಾನರ್ ಕಟ್ಟುವ ವಿಚಾರದಲ್ಲಿ ಎರಡು ರಾಜಕೀಯ ಬಣಗಳ (ಬಿಜೆಪಿ ಜನಾರ್ಧನ ರೆಡ್ಡಿ ಬಣ ಹಾಗೂ ಕಾಂಗ್ರೆಸ್ ಶಾಸಕ ನಾ. ರಾ. ಭರತ್ ರೆಡ್ಡಿ ಬಣ) ನಡುವೆ ಸಂಘರ್ಷ ಉಂಟಾಗಿ ಕಲ್ಲು ತೂರಾಟ ನಡೆದು ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿತ್ತು. ಈ ವೇಳೆ ಉದ್ರಿಕ್ತ ಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಜಿಲ್ಲಾ ಪೊಲೀಸ್ ಆಡಳಿತ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿತ್ತು.

ಅಮಾನತಿಗೆ ಕಾರಣಗಳೇನು?

ಡಿಜಿ ಮತ್ತು ಐಜಿಪಿ ಅವರು ಸಲ್ಲಿಸಿದ ವರದಿಯ ಆಧಾರದ ಮೇಲೆ ಸರ್ಕಾರ ಈ ಕ್ರಮ ಕೈಗೊಂಡಿದೆ. ಅಮಾನತು ಆದೇಶದಲ್ಲಿ ಮುಖ್ಯವಾಗಿ ಎರಡು ಪ್ರಮುಖ ಅಂಶಗಳನ್ನು ಉಲ್ಲೇಖಿಸಲಾಗಿದೆ.
ಸ್ಥಿತಿಗತಿ ನಿಭಾಯಿಸುವಲ್ಲಿ ವೈಫಲ್ಯ: ಗಲಭೆಯ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿಭಾಯಿಸುವಲ್ಲಿ ಪವನ್ ನೆಜ್ಜೂರು ಅವರು ವಿಫಲರಾಗಿದ್ದಾರೆ.

ಹಿರಿಯ ಅಧಿಕಾರಿಗಳಿಗೆ ತಪ್ಪು ಮಾಹಿತಿ:

ಮೈದಾನದಲ್ಲಿನ ನೈಜ ಸ್ಥಿತಿಗತಿಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಸರಿಯಾದ ಮಾಹಿತಿ ನೀಡುವಲ್ಲಿ ಅಥವಾ ಬ್ರೀಫಿಂಗ್ ನೀಡುವಲ್ಲಿ ಎಸ್‌.ಪಿ ಎಡವಿದ್ದಾರೆ.

ಸರ್ಕಾರದ ಆದೇಶ: ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು 1969 ರ ಅಡಿಯಲ್ಲಿ ಈ ಅಮಾನತು ಆದೇಶವನ್ನು ಹೊರಡಿಸಲಾಗಿದೆ.

ಈ ಆದೇಶದ ಪ್ರಮುಖ ಅಂಶಗಳು ಹೀಗಿವೆ:

ಪವನ್ ನೆಜ್ಜೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ.
ತನಿಖೆ ಬಾಕಿ ಇರುವವರೆಗೂ ಇವರು ಕೇಂದ್ರ ಸ್ಥಾನವನ್ನು ಬಿಟ್ಟು ಹೊರಹೋಗುವಂತಿಲ್ಲ.
ಅಮಾನತು ಅವಧಿಯಲ್ಲಿ ಅವರಿಗೆ ನಿಯಮಾನುಸಾರ ಜೀವನೋಪಾಯ ಭತ್ಯೆಯನ್ನು ನೀಡಲಾಗುತ್ತದೆ.
ಬಳ್ಳಾರಿ ವ್ಯಾಪ್ತಿಯ ಡಿಐಜಿಪಿ (DIGP) ಅವರು ನೀಡಿದ ಶಿಫಾರಸಿನ ಮೇರೆಗೆ ಡಿಜಿ ಮತ್ತು ಐಜಿಪಿ ಅವರು ಈ ಕ್ರಮಕ್ಕೆ ಅನುಮೋದನೆ ನೀಡಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಶಾಂತಿ ಕಾಪಾಡುವ ದೃಷ್ಟಿಯಿಂದ ಹಾಗೂ ಅಧಿಕಾರಿಗಳ ಜವಾಬ್ದಾರಿಯನ್ನು ಎಚ್ಚರಿಸಲು ಸರ್ಕಾರ ಈ ಕಠಿಣ ನಿರ್ಧಾರ ಕೈಗೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಅಧಿಕಾರ ಸ್ವೀಕರಿಸಿ ಒಂದೇ ದಿನಕ್ಕೆ ಅಮಾನತು:

ರಾಜ್ಯ ಸರ್ಕಾರವು ಹೊಸ ವರ್ಷಕ್ಕೂ ಮುನ್ನ ರಾಜ್ಯಾದ್ಯಂತ ಪೊಲೀಸ್ ಇಲಾಖೆಯ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಬಳ್ಳಾರಿಗೆ ವರ್ಗಾವಣೆಯಾಗಿದ್ದ ಪವನ್ ನೆಜ್ಜೂರು ಅವರು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಿ.31ರಂದು ಅಧಿಕಾರ ಸ್ವೀಕರಿಸಿದ್ದರು. ಬಳ್ಳಾರಿ ನಗರದ ಬಗ್ಗೆ ಮಾಹಿತಿ ಸಂಗ್ರಹಿಸುವ ಮುನ್ನವೇ ಜ.1ರ ರಾತ್ರಿ ದೊಡ್ಡದಾಗಿ ಗಲಭೆ ನಡೆದಿದೆ. ನಗರದ ಪರಿಚಯವೇ ಇಲ್ಲದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕರ್ತವ್ಯ ಲೋಪದ ಆಧಾರದ ಮೇಲೆ ಇದೀಗ ಅಮಾನತ್ತಾಗಿ ಮನೆಯಲ್ಲಿ ಕೂರುವಂತಾಗಿದೆ. ಇದು ಅವರ ಸರ್ಕಾರಿ ಸೇವೆಯ ಮೇಲೆಯೂ ಕಪ್ಪುಚುಕ್ಕೆಯಾಗಿ ಶಾಶ್ವತವಾಗಿ ಉಳಿಯಲಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!