ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಹಿಳೆಯರಲ್ಲಿ ಅಕ್ಷರಬೀಜ ಬಿತ್ತಿದ ಸಾಧಕಿ ಸಾವಿತ್ರಿಬಾಯಿ ಫುಲೆ

ಬಳ್ಳಾರಿ / ಕಂಪ್ಲಿ : ಸಮಾಜದಲ್ಲಿ ಎದುರಾದ ಅನೇಕ ಕಷ್ಟ, ಅವಮಾನಗಳನ್ನು ಸಹಿಸಿಕೊಂಡು ಜೀವನವಿಡೀ ಹೋರಾಟ ನಡೆಸಿದ ಸಾವಿತ್ರಿಬಾಯಿ ಫುಲೆ ಅವರು ದಲಿತರು ಮತ್ತು ಮಹಿಳೆಯರ ಹೃದಯದಲ್ಲಿ ಅಕ್ಷರಬೀಜ ಬಿತ್ತಿದ ಶಿಕ್ಷಣ ಸಾಧಕಿ ಎಂದು ಮುಖ್ಯೋಪಾಧ್ಯಾಯನಿ ಕೆ. ಶ್ವೇತಾ ಅಭಿಪ್ರಾಯಪಟ್ಟರು.
ಶನಿವಾರ ಪಟ್ಟಣದ ಸ್ಥಳೀಯ ಕೋಟೆಯ ಶ್ರೀ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಹಮ್ಮಿಕೊಂಡ ಸಾವಿತ್ರಿಬಾಯಿ ಫುಲೆ ಅವರ 194ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ
ಸಾವಿರಾರು ವರ್ಷಗಳಿಂದ ಅಕ್ಷರಲೋಕದಿಂದ ವಂಚಿತರಾದ ದಲಿತರು, ಮಹಿಳೆಯರಿಗೆ ಸ್ವತಃ ಶಿಕ್ಷಕಿಯಾಗಿ ಅಕ್ಷರಮಾಲೆ ತೊಡಿಸಿದವರು ಫುಲೆ. ಶೋಷಣೆಯಿಂದ ಪಾರಾಗಲು ಸ್ವಾಭಿಮಾನದ ಜೀವನಕ್ಕೆ ದಾರಿದೀಪವಾದ ಅಕ್ಷರಮಾತೆ. ಅವರ ಜಯಂತಿ ಆಚರಿಸುತ್ತಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಅವರ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಬಾಲ ವಿಧವೆಯರ ನಿಲಯ, ಶಾಲೆ, ಹಾಸ್ಟಲ್‌ಗಳನ್ನು ತೆರೆದು ಸಮಾಜ ಸುಧಾರಣೆ ಮಾಡಿದ ಜ್ಯೋತಿಭಾ ಫುಲೆ ಹಾಗೂ ಸಾವಿತ್ರಿಬಾಯಿ ಫುಲೆ ದಂಪತಿಯನ್ನು ಈಗಲಾದರೂ ಸ್ಮರಿಸುವ ಅವಕಾಶ ದೊರೆಕಿಸಿಕೊಟ್ಟಿರುವುದು ಅವರ ತ್ಯಾಗಕ್ಕೆ ಸಂದ ಗೌರವವಾಗಿದೆ. ಆದ್ದರಿಂದ ನಾವೆಲ್ಲಾ ಅವರನ್ನು ಮಾದರಿಯಾಗಿಟ್ಟುಕೊಂಡು ಶಿಕ್ಷಣ ಪಡೆಯುವ ಮೂಲಕ ಸ್ವತಂತ್ರ, ಸ್ವಾಭಿಮಾನ, ಸಮಾನತೆಯ ಅನ್ಯಾಯವನ್ನು ಧಿಕ್ಕರಿಸುವ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದರಿಂದ ಅವರ ಚಿಂತನೆ ಹಾಗೂ ಶ್ರಮಕ್ಕೆ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಸಹ- ಶಿಕ್ಷಕರಾದ ಉಮಾ ಕೊಲ್ಕರ್, ವರ್ಷಾಮಜುಮದಾರ್, ಜೆ. ಅಕ್ಷತಾ, ಗೌಸಿಯಾ, ಸುನೀತಾ, ನಂದಿನಿ, ಕೊಲ್ಕರ್ ಜಯಶ್ರೀ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಪಾಲಕ ಪೋಷಕರು ಹಾಜರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!