ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ ಶಾಸಕರು

ಶಾಸಕ ಎಂ. ಆರ್. ಮಂಜುನಾಥ್ ರವರು ಹನೂರು ಪಟ್ಟಣದ ಏಳನೇ ವಾರ್ಡಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಸಮಸ್ಯೆಗಳನ್ನು ಪಾಲಿಸುವ ಮೂಲಕ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಹನೂರು ಪಟ್ಟಣದ 7ನೇ ವಾರ್ಡಿನ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿದ್ದ ಶಾಸಕ ಎಂಆರ್ ಮಂಜುನಾಥ್ ನಾಗರಿಕರಿಂದ ಸಮಸ್ಯೆಗಳನ್ನು ಪರಿಹರಿಸಲು ಭೇಟಿ ನೀಡಿ ಅಲ್ಲಿನ ಕುಡಿಯುವ ನೀರಿನ ಸಮಸ್ಯೆ ಬೀದಿ ದೀಪ ಅಳವಡಿಸುವಂತೆ ಹಾಗೂ ರಸ್ತೆಗಳ ಅಭಿವೃದ್ಧಿಗೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ನಾಗರಿಕರಿಂದ ಮಾಹಿತಿಯನ್ನು ಆಧರಿಸಿ ಸ್ಥಳದಲ್ಲಿದ್ದ ಪಟ್ಟಣ ಪಂಚಾಯಿತಿ ಇಂಜಿನಿಯರ್ ಅವರಿಗೆ ಪಟ್ಟಿ ಮಾಡಿ ಪಟ್ಟಣದ ಅಭಿವೃದ್ಧಿಗೆ ಒತ್ತು ನೀಡಲು ಸಮಸ್ಯೆಗಳ ಪಟ್ಟಿ ಹೆಚ್ಚಿನ ಸಿಬ್ಬಂದಿಗಳನ್ನು ಪಡೆದು ಬಡಾವಣೆಗಳಲ್ಲಿ ಚರಂಡಿ ಸ್ವಚ್ಛತೆ ವಾತಾವರಣವನ್ನು ಸ್ವಚ್ಛಗೊಳಿಸುವಂತೆ ಸ್ಥಳದಲ್ಲಿದ್ದ ಪಟ್ಟಣ ಪಂಚಾಯತಿ ಆರೋಗ್ಯ ಅಧಿಕಾರಿ ಪ್ರಕಾಶ್ ಅವರಿಗೆ ಸೂಚನೆ ನೀಡಿದರು.

ಪಟ್ಟಣದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ : ಪಟ್ಟಣ ಪಂಚಾಯಿತಿಯ ಹದಿಮೂರು ವಾರ್ಡ್ಗಳನ್ನು ಸಮಗ್ರ ಅಭಿವೃದ್ಧಿಪಡಿಸಲು ಸರ್ಕಾರದಿಂದ 30 ಕೋಟಿ ಅನುದಾನ ನೀಡುವಂತೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು ಡಿಪಿಆರ್ ಯೋಜನೆಯ ಮೂಲಕ ಪಟ್ಟಣದಲ್ಲಿರುವ ರಸ್ತೆಗಳ ಅಭಿವೃದ್ಧಿ ಒಳಚರಂಡಿ ನಿರ್ಮಾಣ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಬೀದಿ ದೀಪ ಹಳವಡಿಕೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಭೇಟಿ ನೀಡಿದ್ದ ನಾಗರಿಕರಿಗೆ ಭರವಸೆ ನೀಡಿದರು.

ತಟ್ಟೆ ಹಳ್ಳ ಸೇತುವೆ ಬಳಿ ಸಾರ್ವಜನಿಕರ ಶೌಚಾಲಯ ನಿರ್ಮಾಣಕ್ಕೆ ಅಸ್ತು:
ದಿನನಿತ್ಯ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯಲ್ಲಿ ತೆರಳುವ ಭಕ್ತಾದಿಗಳಿಗೆ ಹಾಗೂ ಪಟ್ಟಣದ ನಾಗರಿಕರಿಗೆ ತಟ್ಟೆ ಹಳ್ಳ ಸೇತುವೆ ಬಳಿ ನಾಗರಿಕರಿಗೆ ಸಾರ್ವಜನಿಕ ಶೌಚಾಲಯವನ್ನು ನಿರ್ಮಾಣ ಮಾಡಿ ಹಳ್ಳದ ಎರಡು ಕಡೆ ತಡೆ ಗೋಡೆ ನಿರ್ಮಾಣ ಮಾಡಿ ಮಳೆ ನೀರು ಸರಾಗವಾಗಿ ಹೋಗಲು ಕ್ರಮ ಕೈಗೊಳ್ಳಬೇಕು ಜೊತೆಗೆ ನಾಗರಿಕರಿಗೆ ಸೌಚಾಲಯ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಇಂಜಿನಿಯರ್ ನಾಗರಾಜ್ ಆರೋಗ್ಯ ಅಧಿಕಾರಿ ಪ್ರಕಾಶ್ ಮುಖಂಡರಾದ ರಾಜುಗೌಡ ವಿಜಯಕುಮಾರ್ ಸಿದ್ದರಾಜು ರಾಜು ರಾಜು ನಾಯ್ಡು ನಟರಾಜ ಗೌಡ ನಾಮ ನಿರ್ದೇಶನ ಸದಸ್ಯರಾದ ಮಹಾದೇಶ್ ಗೌಡ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

ವರದಿ : ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!