ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗಿನ್ನಿಸ್ ದಾಖಲೆ ಪುಟ ಸೇರಿದ ಕಂಪ್ಲಿ ವಿಜಯನಗರ ಶಾಲೆಯ ವಿದ್ಯಾರ್ಥಿಗಳು

ಕಂಪ್ಲಿ: ಇತ್ತೀಚೆಗೆ ಹೈದರಾಬಾದಿನ ಗಚ್ಚಿಬೋಲಿ ಸ್ಟೇಡಿಯಂನಲ್ಲಿ ಭಾರತ ಆರ್ಟ್ಸ್ ಅಕಾಡೆಮಿ ಹಾಗೂ ತೆಲಂಗಾಣ ಸರ್ಕಾರದ ಸಂಯುಕ್ತಾಶ್ರಯದಲ್ಲಿ ನಡೆದ ಕೂಚುಪುಡಿ ಕಲಾವೈಭವಂ-2ರಲ್ಲಿ 5800 ಕೂಚುಪುಡಿ ಕಲಾವಿದರೊಂದಿಗೆ ಭಾಗವಹಿಸಿದ ಕಂಪ್ಲಿ ಪಟ್ಟಣದ ಕಮ್ಮವಾರಿ ಸಂಘದ ವಿಜಯನಗರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಖುಷಿ ವಿರಾಜ್, ಇಷಿತಾ ಹಾಗೂ ವಂದನಾ ಗಿನ್ನಿಸ್ ವಿಶ್ವ ದಾಖಲೆ ಪುಟವನ್ನು ಸೇರುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಗಿನ್ನಿಸ್ ವಿಶ್ವ ದಾಖಲೆ ಪುಟ ಸೇರಿದ ವಿದ್ಯಾರ್ಥಿಗಳನ್ನು ಅಭಿನಂದಿಸಿ ನೆನಪಿನ ಕಾಣಿಕೆಗಳನ್ನು ನೀಡಿ ಮಾತನಾಡಿದ ಶಾಲೆಯ ಅಧ್ಯಕ್ಷರಾದ ಕೆ.ಎಸ್.ಎಸ್.ವಿ.ಬಿ. ಸುಬ್ಬರಾವು ಬದುಕಿನಲ್ಲಿ ಗುರಿ ಅತ್ಯಂತ ಅವಶ್ಯಕವಾಗಿದೆ. ಮುಂದೆ ಗುರಿ, ಹಿಂದೆ ಗುರು ಇದ್ದಾಗ ಮಾತ್ರ ಉತ್ತಮ ಸಾಧನೆ ಮಾಡಲು ಸಾಧ್ಯ ಇಂತಹ ಅಪರೂಪದ ಸಾಧನೆಯನ್ನು ನಮ್ಮ ಶಾಲೆಯ ವಿದ್ಯಾರ್ಥಿಗಳು ಮಾಡಿರುವುದು ನಮ್ಮ ಶಾಲೆಗೆ, ತಾಲ್ಲೂಕಿಗೆ, ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ ಎಂದರು.
ನಂತರ ಗಿನ್ನಿಸ್ ವಿಶ್ವ ದಾಖಲೆ ಪುಟ ಸೇರಿದ ವಿದ್ಯಾರ್ಥಿಗಳು ಖುಷಿ ವಿರಾಜ್, ಇಷಿತಾ ಮತ್ತು ವಂದನಾ ಅವರನ್ನು ಶಾಲೆಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಕೆ.ವಿಷ್ಣು, ಕಮ್ಮವಾರಿ ಸಂಘದ ಕಾರ್ಯದರ್ಶಿ ಪಿ.ರಾಮಚಂದ್ರರಾವು, ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!